ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 23 : ಅಕ್ಷರ ದಾಸೋಹದ ಪ್ರಥಮ ದರ್ಜೆ ಸಹಾಯಕಿ ಅಯೇಷಾ ಸಿದ್ದಿಖಾ ಅವರನ್ನು ಕರ್ತವ್ಯ ಲೋಪ ಎಸಗಿದ ಆಪಾದನೆ ಮೇಲೆ ಅಮಾನತುಗೊಳಿಸಿ ಚಿತ್ರದುರ್ಗ ಜಿಲ್ಲಾ ಪಂಚಾಯತಿ ಸಿಇಒ ಎಸ್.ಜೆ. ಸೋಮಶೇಖರ್ ಅವರು ಆದೇಶ ಹೊರಡಿಸಿದ್ದಾರೆ.
ಸರ್ಕಾರದ ಆದೇಶದಂತೆ ದ್ವಿ-ಲಕೋಟೆ ಟೆಂಡರ್ ಪ್ರಕ್ರಿಯೆಯಲ್ಲಿ ಪ್ರಾಧಿಕಾರದಿಂದ ತಾಂತ್ರಿಕ ಬಿಡ್ ತೆರೆಯಲು ಅನುಮತಿ ಪಡೆಯದೇ ಎರಡು ಲಕೋಟೆಗಳನ್ನು ಏಕಕಾಲದಲ್ಲಿ ತೆರೆದು ಕೆ.ಟಿ.ಪಿ.ಪಿ ನಿಯಮ ಉಲ್ಲಂಘನೆ ಮಾಡಿ ಕರ್ತವ್ಯ ಲೋಪ ಎಸಗುವ ಮೂಲಕ ಸರ್ಕಾರಿ ನೌಕರರಿಗೆ ತರವಲ್ಲದ ರೀತಿಯಲ್ಲಿ ವರ್ತಿಸಿ, ಕರ್ನಾಟಕ ನಾಗರಿಕ ಸೇವಾ (ನಡಾವಳಿಕೆ) ನಿಯಮಾವಳಿಗಳನ್ನು ಉಲ್ಲಂಘಿಸಿರುತ್ತಾರೆ.
ಈ ಹಿನ್ನೆಲೆಯಲ್ಲಿ ಲಿಖಿತ ಸಮಾಜಾಯಿಷಿಯನ್ನು ಸಲ್ಲಿಸುವಂತೆ ಕಾರಣ ಕೇಳಿ ನೋಟೀಸ್ ಜಾರಿ ಮಾಡಲಾಗಿರುತ್ತದೆ. ಅದರಂತೆ ಸಮಜಾಯಿಷಿಯನ್ನು ಸಲ್ಲಿಸುತ್ತಾ ಸಮರ್ಪಕವಾಗಿ ಉತ್ತರವನ್ನು ನೀಡಿರುವುದಿಲ್ಲ. ಈ ಕಾರಣಗಳಿಂದ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಸೇವೆಯಿಂದ ಅಮಾನತ್ತುಗೊಳಿಸಿ ಜಿಲ್ಲಾ ಪಂಚಾಯತಿ ಸಿಇಒ ಎಸ್.ಜೆ. ಸೋಮಶೇಖರ್ ಅವರು ಆದೇಶಿದ್ದಾರೆ.
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…