ಚಿತ್ರದುರ್ಗ | ಲಕ್ಷಾಂತರ ಮೌಲ್ಯದ ಮೆಕ್ಕೆಜೋಳದ ರಾಶಿಗೆ ಬೆಂಕಿ

1 Min Read

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

 

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 15 : ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದ ಬಳಿ ಮೆಕ್ಕೆಜೋಳದ ರಾಶಿಗೆ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ಮೌಲ್ಯದ ಮೆಕ್ಕೆಜೋಳ ಬೆಂಕಿಗಾಹುತಿ ಆದ ಘಟನೆ ಶನಿವಾರ ನಡೆದಿದೆ.

ಲಕ್ಷ್ಮೀಸಾಗರ ಗ್ರಾಮದ ರೈತ ಧನಂಜಯ್ ಎಂಬುವರಿಗೆ ಸೇರಿದ ಜಮೀನಿನಲ್ಲಿ ಈ ಘಟನೆ ನಡೆದಿದೆ.
20 ಎಕರೆಯಲ್ಲಿ ಬೆಳೆದಿದ್ದ ಮೆಕ್ಕೆಜೋಳವನ್ನು ಒಂದೆಡೆ ರಾಶಿ ಮಾಡಿದ್ದರು. ಯಾರೋ ದುಷ್ಕರ್ಮಿಗಳು ದ್ವೇಷದಿಂದ ಮೆಕ್ಕೆಜೋಳದ ರಾಶಿಗೆ ಬೆಂಕಿಯಿಟ್ಟಿದ್ದಾರೆಂದು ಶಂಕಿಸಲಾಗಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಮೆಕ್ಕೆಜೋಳ ಬೆಂಕಿಗೆ ಆಹುತಿಯಾಗಿದೆ. ಘಟನಾ ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಬಂದು ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.
ಭರಮಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಪ್ರಕರಣ

Share This Article