Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ: ಹಿಂದೂ ಮಹಾಗಣಪತಿ ಹಿಡಿದಿದ್ದ ಧ್ವಜ ಬರೋಬ್ಬರಿ ₹4 ಲಕ್ಷಕ್ಕೆ ಹರಾಜು

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಅ. 03 : ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ ದಳದವತಿಯಿಂದ ಪ್ರತಿವರ್ಷ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವ `ಹಿಂದೂ ಮಹಾಗಣಪತಿ ಮಹೋತ್ಸವ’ದ ಅಂಗವಾಗಿ ಶನಿವಾರ ಶೋಭಾಯಾತ್ರೆಯನ್ನು ನಡೆಸಲಾಯಿತು ಇದರಲ್ಲಿ ಕಳೆದ 14 ರಿಂದ ಅ. 2ರವರೆಗೆ ಹಿಂದೂ ಮಹಾ ಗಣಪತಿ ತನ್ನ ಕೈಯಲ್ಲಿ ಹಿಡಿದುಕೊಂಡಿದ್ದ ಧ್ವಜದ ಹರಾಜನ್ನು ಇಂದು ನಡೆಸಲಾಯಿತು. ಇದರಲ್ಲಿ ಹಲವಾರು ಜನ ಇದಕ್ಕೆ ಪೈಪೋಟಿ ಮಾಡಿದರು. ಆದರೆ ಅಂತಿಮವಾಗಿ ಮಧುಗಿರಿ ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷರಾದ ಹನುಮಂತೇಗೌಡ ರವರು 4 ಲಕ್ಷಕ್ಕೆ ಹರಾಜಿನಲ್ಲಿ ತೆಗೆದುಕೊಂಡರು.

ಈ ಸಂದರ್ಭದಲ್ಲಿ ಸಂಸದರಾದ ಗೋವಿಂದ ಕಾರಜೋಳ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ .ಕೆ.ಎಸ್.ನವೀನ್, ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಬದರಿನಾಥ್, ಶಾಸಕರಾದ ಕೆ.ಸಿ.ವಿರೇಂದ್ರ ಪಪ್ಪಿ, ಬಿಜೆಪಿ ಮುಖಂಡರಾದ ಅನಿತ್ ಕುಮಾರ್, ಡಾ.ಸಿದ್ದಾರ್ಥ ಗುಂಡಾರ್ಪಿ, ಜಿ.ಎಂ.ಸುರೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now