ಚಿತ್ರದುರ್ಗ,(ಜುಲೈ 13):ಚಿತ್ರದುರ್ಗ ನ್ಯಾಯಾಂಗ ಘಟಕಕ್ಕೆ ಮಂಜೂರಾಗಿರುವ ಶೀಘ್ರಲಿಪಿಗಾರರು ಗ್ರೇಡ್-III, ಬೆರಳಚ್ಚುಗಾರರು, ಬೆರಳಚ್ಚು-ನಕಲುಗಾರರು, ಆದೇಶ-ಜಾರಿಕಾರರು ಹಾಗೂ ಜವಾನರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಗಸ್ಟ್ 18 ಅರ್ಜಿ ಸಲ್ಲಿಸಲು ಕೊನೆಯ ದಿನ.
ಶೀಘ್ರಲಿಪಿಗಾರರು-1 ಹುದ್ದೆ, ಬೆರಳಚ್ಚುಗಾರರು-1 ಹುದ್ದೆ, ಬೆರಳಚ್ಚು-ನಕಲುಗಾರರು-1 ಹುದ್ದೆ, ಆದೇಶ-ಜಾರಿಕಾರರು-2 ಹುದ್ದೆ ಹಾಗೂ ಜವಾನ-27 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಹಾಗೂ ಅಧಿಸೂಚಿಸಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು http://districts.ecourts.gov.in/chitradurga-onlinerecruitment ರಲ್ಲಿ ನೀಡಲಾದ ಲಿಂಕ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.
ಆನ್‍ಲೈನ್ ಮೂಲಕ ಅರ್ಜಿಗಳನ್ನು ಜುಲೈ 15 ರಿಂದ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ಆಗಸ್ಟ್ 18 ರಾತ್ರಿ 11.59 ಗಂಟೆಗೆ ಕೊನೆಯ ದಿನ. ಭಾರತೀಯ ಸ್ಟೇಟ್ ಬ್ಯಾಂಕ್ ಚಲನ್ ಮುಖಾಂತರ ಶುಲ್ಕ ಪಾವತಿಸಲು ಆಗಸ್ಟ್ 20 ಕೊನೆಯ ದಿನವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮುಖ್ಯ ಆಡಳಿತಾಧಿಕಾರಿ ಟಿ.ಪುರುಷೋತ್ತಮ ತಿಳಿಸಿದ್ದಾರೆ.
ಮಧ್ಯಸ್ಥಿಕೆಗಾರರ ನೇಮಕಾತಿಗೆ ಅರ್ಜಿ
ಜಿಲ್ಲಾ ಗ್ರಾಹಕರ ಆಯೋಗದ ಮಧ್ಯಸ್ಥಿಕೆ ಕೇಂದ್ರದಲ್ಲಿ ಖಾಲಿ ಇರುವ ಮಧ್ಯಸ್ಥಿಕೆಗಾರರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 26 ಅರ್ಜಿ ಸಲ್ಲಿಸಲು ಕೊನೆಯ ದಿನ.
ಆಸಕ್ತರು ಅರ್ಜಿ ನಮೂನೆಯನ್ನು https://kscdrc.karnataka.gov.in ರಿಂದ ಡೌನ್‍ಲೋಡ್ ಮಾಡಿಕೊಂಡು, ಅರ್ಜಿಯೊಂದಿಗೆ ಅಗತ್ಯ ದಾಖಲೆಗಳ ದೃಢೀಕೃತ ಪ್ರತಿಗಳೊಂದಿಗೆ ಆಗಸ್ಟ್ 26 ಸಂಜೆ 5 ರೊಳಗೆ ಚಿತ್ರದುರ್ಗ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಕಚೇರಿಗೆ ನೋಂದಾಯಿತ ಅಂಚೆ ಮೂಲಕ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ದೂರವಾಣಿ ಸಂಖ್ಯೆ 08194-231451 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ದೇಶದ ಅತ್ಯಂತ ಶ್ರೀಮಂತರಲ್ಲಿ ಒಬ್ಬರಾದ ರತನ್ ಟಾಟಾ ಕಳೆದ ವರ್ಷ ಇಹಲೋಕ ತ್ಯಜಿಸಿದ್ದರು. ರತನ್ ಟಾಟಾ ಅವರಿಗೆ ಮದುವೆಯಾಗಿರಲಿಲ್ಲ. ಹೀಗಾಗಿ…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 07…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ.ಫೆ.07: ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ದೇಶದ, ರಾಜ್ಯದ ಸಾಂಸ್ಕøತಿಕ ರಾಯಬಾರಿಗಳಾಗಿ ಕಲೆ, ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೊಯುವ ಕೆಲಸ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಶಿಕ್ಷಣ ಇಲಾಖೆಗೆ ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಹೊಸದಾಗಿ 15…