ಸುದ್ದಿಒನ್, ಚಿತ್ರದುರ್ಗ, ಜುಲೈ. 01 : ನಗರದ ಜೋಗಿಮಟ್ಟಿ ರಸ್ತೆಯಲ್ಲಿ ವಾಸವಿದ್ದ ಹಾಗೂ ಹಿರಿಯೂರು ತಾಲೂಕಿನ ಉಪ ವಲಯ ಅರಣ್ಯಾಧಿಕಾರಿ (ಡಿಆರ್‌ಎಫ್‌ಒ) ವೆಂಕಟೇಶ್ (37 ವರ್ಷ) ಅವರು ನಿನ್ನೆ (ಜೂನ್.30, ಮಂಗಳವಾರ) ರಾತ್ರಿ ಏಕಾಏಕಿ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.
ಸುರಪುರ ಮೂಲದವರಾದ ವೆಂಕಟೇಶ್ ಅವರು ನಿನ್ನೆ ರಾತ್ರಿ ತಮ್ಮ ನಿವಾಸದಲ್ಲಿದ್ದ ವೇಳೆ ಇದ್ದಕ್ಕಿದ್ದಂತೆ ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಚಿಕಿತ್ಸೆ ನೀಡಲು ಪ್ರಯತ್ನಿಸಿದರೂ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೃತರು ಪತ್ನಿ, ಇಬ್ಬರು ಗಂಡು ಮಕ್ಕಳು ಹಾಗೂ ಅಪಾರ ಕುಟುಂಬದವರನ್ನು ಅಗಲಿದ್ದಾರೆ.
ಘಟನೆ ಸಂಬಂಧ ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು. ಸಹಜ ಸಾವು ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಅಂತ್ಯಕ್ರಿಯೆ ಅವರ ಸ್ವಂತ ಊರಾದ ಸುರಪುರದಲ್ಲಿ ಇಂದು ನೆರವೇರಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








