ಸುದ್ದಿಒನ್, ಚಿತ್ರದುರ್ಗ, ಫೆ. 04 : ನಗರದ ನಗರಸಭೆಯ ಮಾಜಿ ಸದಸ್ಯರಾಗಿದ್ದ ಚಂದ್ರಮ್ಮ (76) ಆನಾರೋಗ್ಯದ ನಿಮ್ಮಿತ್ತ ಇಂದು ಮಧ್ಯಾಹ್ನ 2.30ರ ಸಮಯದಲ್ಲಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಚಂದ್ರಮ್ಮನವರು ಮಾಜಿ ಪ್ರಧಾನಿ ವಾಜಿಪೇಯವರು ಬಿಜೆಪಿ ಅಧ್ಯಕ್ಷರಾಗಿದ್ದಾಗ ಬಿ.ಜೆ.ಪಿ.ಯ ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯರಾಗಿ ಮತ್ತು ಚಿತ್ರದುರ್ಗ ನಗರದ 5 ನೇವಾರ್ಡ್‍ನ ಸದಸ್ಯರಾಗಿ ಹಿಂದೂಪರ ಹೋರಾಟಗಾರಾಗಿ ವಕೀಲರಾಗಿ ಜನಾನುರಾಗಿಯಾಗಿದ್ದರು.
ಮೃತರು ಸಹೋದರಿ, ಸಹೋದರರು ಸೇರಿದಂತೆ ಆಪಾರವಾದ ಬಂಧು ಬಳಗವನ್ನು ಆಗಲಿದ್ದಾರೆ. ಮೃತರ ಅಂತ್ಯಕ್ರಿಯೆಯೂ ಫೆ. 5ರ ಮಧ್ಯಾಹ್ನ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಸಂತಾಪ : ನಗರಸಭೆಯ ಮಾಜಿ ಸದಸ್ಯರಾದ ಚಂದ್ರಮ್ಮ ರವರ ನಿಧನಕ್ಕೆ ಚಿತ್ರದುರ್ಗ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಮುಖಂಡರು, ಪದಾಧಿಕಾರಿಗಳು ಸಂತಾಪವನ್ನು ಸೂಚಿಸಿ ಅವರ ಆತ್ಮಕ್ಕೆ ಶಾಂತಿಯನ್ನು ಕೋರಿದ್ಧಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.








