ಚಿತ್ರದುರ್ಗ : ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ನೆರ್ಲಗುಂಟೆ ಎನ್. ತಿಪ್ಪೇಸ್ವಾಮಿ ಅವರ ಪುತ್ರ ಶಿವಕುಮಾರ್ (32) ಅವರು ಅನಾರೋಗ್ಯದಿಂದ ನಿಧನರಾದರು.
ಮೃತರಿಗೆ ಪತ್ನಿ, ಓರ್ವ ಮಗ ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯನ್ನು ನಾಳೆ (ಗುರುವಾರ) ಚಳ್ಳಕೆರೆ ತಾಲೂಕಿನ ಸ್ವಗ್ರಾಮವಾದ ನೇರ್ಲಗುಂಟೆಯಲ್ಲಿ
ಮಾಜಿ ಶಾಸಕ ತಿಪ್ಪೇಸ್ವಾಮಿ ಅವರಿಗೆ ಶಿವಕುಮಾರ್ ಹಾಗೂ ಓರ್ವ ಪುತ್ರಿಯಿದ್ದರು. ಇಪ್ಪತ್ತು ವರ್ಷಗಳ ಹಿಂದೆಯೇ ಮಗಳು ಸಹ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ. ಇದೀಗ ಅನಾರೋಗ್ಯದಿಂದ ಬಳಲುತ್ತಿದ್ದ ಅವರ ಮಗ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೊದಲ ಬಾರಿಗೆ ಶಾಸಕರಾಗಿ ಆಯ್ಕೆ: ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಎನ್. ತಿಪ್ಪೇಸ್ವಾಮಿ ಅವರು ಶಿಕ್ಷಕ ಸ್ಥಾನಕ್ಕೆ ರಾಜೀನಾಮೆ ನೀಡಿ 2013 ರಲ್ಲಿ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಬಿಎಸ್ಆರ್ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮೊದಲ ಬಾರಿಗೆ ಗೆಲುವು ಕಂಡಿದ್ದರು.
ನಂತರ 2018 ರಲ್ಲಿ ಬಿಎಸ್ಆರ್ ಕಾಂಗ್ರೆಸ್ ಪಕ್ಷ ಹಾಗೂ ಸಂಸ್ಥಾಪಕ ಬಿ. ಶ್ರೀರಾಮುಲು ಅವರು ಬಿಜೆಪಿ ಜೊತೆ ವಿಲೀನಗೊಂಡ ಬಳಿಕ ಮೊಳಕಾಲ್ಮೂರಿನಿಂದ ತಿಪ್ಪೇಸ್ವಾಮಿ ಅವರಿಗೆ ಟಿಕೆಟ್ ಸಿಗಲಿಲ್ಲ.
2018 ರಲ್ಲಿ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಬಿ. ಶ್ರೀರಾಮುಲು ಸ್ಪರ್ಧಿಸಿದ ಕಾರಣ ಎನ್. ತಿಪ್ಪೇಸ್ವಾಮಿ ಅವರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಶ್ರೀರಾಮುಲು ವಿರುದ್ಧ ಸೋತಿದ್ದರು.
ನಂತರದ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಕ್ಷೇತ್ರಾದ್ಯಂತ ಪಕ್ಷ ಸಂಘಟನೆಗೆ ಮುಂದಾಗಿದ್ದು, 2023 ರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಪ್ರಬಲ ಆಕಾಂಕ್ಷಿಯಾಗಿದ್ದಾರೆ.