Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಮಾಜಿ ರಾಜ್ಯಸಭಾ ಸದಸ್ಯ ಹೆಚ್.ಹನುಮಂತಪ್ಪ ನಿಧನ : ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ

---Advertisement---

ಚಿತ್ರದುರ್ಗ.ಜುಲೈ.13: ದೇಶ ಮತ್ತು ರಾಜ್ಯ ರಾಜಕಾರಣದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ್ದ ಕಾಂಗ್ರೆಸ್ ನ ಹಿರಿಯ ರಾಷ್ಟ್ರೀಯ ನಾಯಕ ಹಾಗೂ ಮಾಜಿ ರಾಜ್ಯಸಭಾ ಸದಸ್ಯ ಹೆಚ್. ಹನುಮಂತಪ್ಪ (95) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಗಾಂಧಿ ಕುಟುಂಬದ ಅತ್ಯಂತ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಹನುಮಂತಪ್ಪ ಅವರು ಮೂರು ಬಾರಿ ರಾಜ್ಯಸಭಾ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೆ, ಎರಡು ಅವಧಿಗೆ ಕೇಂದ್ರ ರೇಷ್ಮೆ ಮಂಡಳಿಯ ಅಧ್ಯಕ್ಷರಾಗಿಯೂ ದೇಶಕ್ಕೆ ಗಣನೀಯ ಕೊಡುಗೆ ನೀಡಿದ್ದರು. ಅವರ ನಿಧನಕ್ಕೆ ನಾಡಿನ ಹಲವು ರಾಜಕೀಯ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕ ದರ್ಶನ ಮತ್ತು ಅಂತ್ಯಸಂಸ್ಕಾರದ ವಿವರ

ಮೃತರ ಅಂತಿಮ ದರ್ಶನಕ್ಕಾಗಿ ಚಿತ್ರದುರ್ಗ ನಗರದ ವಿವಿಧೆಡೆ ಸಾರ್ವಜನಿಕ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 10 ಗಂಟೆಯವರೆಗೆ ನೆಹರು ನಗರದ ಅವರ ನಿವಾಸದಲ್ಲಿ ಸಾರ್ವಜನಿಕರು ಅಂತಿಮ ನಮನ ಸಲ್ಲಿಸಲು ಅವಕಾಶವಿರಲಿದೆ. ತದನಂತರ 10 ರಿಂದ 11 ಗಂಟೆಯವರೆಗೆ ಸರಸ್ವತಿ ಕಾನೂನು ಕಾಲೇಜು ಆವರಣದಲ್ಲಿ ಹಾಗೂ 11:30ರವರೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಾರ್ಥಿವ ಶರೀರವನ್ನು ಇಡಲಾಗುತ್ತದೆ. ಅಲ್ಲಿಂದ ಮುಂದೆ ಜಯದೇವ ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಇಂದು ಮಧ್ಯಾಹ್ನ 4 ಗಂಟೆಗೆ ಚಿತ್ರದುರ್ಗದ ಮುಕ್ತಿಧಾಮದಲ್ಲಿ ಮೃತರ ಅಂತ್ಯಕ್ರಿಯೆ ನೆರವೇರಲಿದೆ.

ಸಿಎಂ, ಡಿಸಿಎಂ ಭೇಟಿ: ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್

ಹನುಮಂತಪ್ಪ ಅವರಿಗೆ ಅಂತಿಮ ಗೌರವ ಸಲ್ಲಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಚಿತ್ರದುರ್ಗಕ್ಕೆ ಆಗಮಿಸಲಿದ್ದಾರೆ. ಸಿಎಂ ಮತ್ತು ಡಿಸಿಎಂ ಭೇಟಿಯ ಹಿನ್ನೆಲೆಯಲ್ಲಿ ಜಯದೇವ ಕ್ರೀಡಾಂಗಣ ಹಾಗೂ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

Join WhatsApp

Join Now

Join Telegram

Join Now