ಚಿತ್ರದುರ್ಗ : ಭೀಕರ ರಸ್ತೆ ಅಪಘಾತದಲ್ಲಿ‌ ನಾಲ್ವರ ಸಾವು

1 Min Read

ಸುದ್ದಿಒನ್, ಚಿತ್ರದುರ್ಗ, ಮೇ. 17 : ಹೊಳಲ್ಕೆರೆ ತಾಲ್ಲೂಕು ಚಿತ್ರಹಳ್ಳಿ ಗೇಟ್ ಬಳಿ ಶುಕ್ರವಾರ ರಾತ್ರಿ ಸುಮಾರು 9 : 30 ರ ವೇಳೆಗೆ ಕಾರು ಮತ್ತು ಟ್ರ್ಯಾಕ್ಟರ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರಲ್ಲಿದ್ದ ನಾಲ್ವರು ಮೃತಪಟ್ಟಿದ್ದಾರೆ.

ಮೃತರನ್ನು ಕಾವ್ಯ (24 ವರ್ಷ), ಗಂಗಮ್ಮ (50 ವರ್ಷ), ಹನ್ಸಿಕಾ (4 ವರ್ಷ) ಮತ್ತು ಮನಸ್ವಿನಿ (2 ವರ್ಷ) ಎಂದು ಗುರುತಿಸಲಾಗಿದೆ.  ಗಾಯಗೊಂಡಿರುವ ಯಶವಂತ (33 ವರ್ಷ) ಅವರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲರೂ ಅರೇಹಳ್ಳಿ ಗ್ರಾಮದವರು ಎಂದು ತಿಳಿದು ಬಂದಿದೆ. ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು SP ರಂಜಿತ್ ಕುಮಾರ್ ಬಂಡಾರು ಅವರು ಮಾಹಿತಿ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks