ಚಿತ್ರದುರ್ಗ | ಭೀಕರ ಅಪಘಾತದಲ್ಲಿ  ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ಸಾವು

1 Min Read

ಸುದ್ದಿಒನ್, ಚಿತ್ರದುರ್ಗ, ಜನವರಿ.25 : ಬೆಳ್ಳಂಬೆಳಿಗ್ಗೆಯೇ ಚಾಲಕನ ನಿಯಂತ್ರಣ ತಪ್ಪಿ ಕಾರು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಮೂವರು ಪುಟ್ಟ ಮಕ್ಕಳು ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಗುರುವಾರ ಮುಂಜಾನೆ ನಡೆದಿದೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಬಿಳಿ ಈ ದುರಂತ ಸಂಭವಿಸಿದೆ.  2 ವರ್ಷದ ಸಿಂಧುಶ್ರೀ, 5 ತಿಂಗಳ ಹಸುಗೂಸು  ಅಯ್ಯಾಳಪ್ಪ, 3 ತಿಂಗಳ ಹಸುಗೂಸು ರಕ್ಷಾ‌ ಮತ್ತು 25 ವರ್ಷದ ಲಿಂಗಪ್ಪ ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಚಳ್ಳಕೆರೆಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ದಂಡಮ್ಮನಳ್ಳಿಯ ನಿವಾಸಿಗಳು ಎಂದು ತಿಳಿದುಬಂದಿದೆ‌. ದೇವದುರ್ಗದಿಂದ ಬೆಂಗಳೂರಿಗೆ ತೆರಳುವಾಗ ಈ ಅಪಘಾತ ನಡೆದಿದ್ದು ಘಟನಾ ಸ್ಥಳಕ್ಕೆ ಚಳ್ಳಕೆರೆ ಪೊಲೀಸ್ ಠಾಣೆಯ ಪಿಎಸ್ಐ ಶಿವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *