ಚಿತ್ರದುರ್ಗ. ಜ. 23: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ಜಿಲ್ಲಾ ಅಂಧತ್ವ ನಿವಾರಣ ವಿಭಾಗ, ನಗರ ಸಭೆ, ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ ಹಾಗೂ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರ ಸಹಯೋಗದಲ್ಲಿ ನಗರದ ಶ್ರೀ ವಿಶ್ವಕರ್ಮ ಕಾಳಿಕಾಂಬ ಕಲ್ಯಾಣ ಮಂಟಪ್ಪದಲ್ಲಿ ಇದೇ ಜ.27 ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ಉಚಿತ ಕಣ್ಣಿನ ತಪಾಸಣೆ, ಶಸ್ತ್ರ ಚಿಕಿತ್ಸೆ ಹಾಗೂ ಕನ್ನಢಕ ವಿತಾರಣಾ ಶಿಬಿರ ಆಯೋಜಿಸಲಾಗಿದೆ.
ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಕಾರ್ಯಕ್ರಮ ಉದ್ಘಾಟಿಸುವರು. ಚಲನಚಿತ್ರ ಕಲಾವಿದ ದೊಡ್ಡಣ್ಣ ಘನ ಉಪಸ್ಥಿತರಿರುವರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಮಂಜಪ್ಪ ಅಧ್ಯಕ್ಷತೆ ವಹಿಸುವರು. ವಿಶೇಷ ಆಹ್ವಾನಿತರಾಗಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ತಾಜ್‍ಪೀರ್, ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಶಿವಣ್ಣ, ಜಿಲ್ಲಾ ಕುರುಬ ಸಂಘದ ಅಧ್ಯಕ್ಷ ಶ್ರೀರಾಮ್, ನಗರಸಭೆ ಕೌನ್ಸಿಲರ್ ಜೆ.ಶಶಿಧರ್, ನಗರಸಭೆ ಮಾಜಿ ಉಪಧ್ಯಾಕ್ಷ ಮಲ್ಲಿಕಾರ್ಜುನ ಎಸ್.ಪಿ, ಸದಸ್ಯರಾದ ವೇದಪ್ರಕಾಶ್, ಮೀನಾಕ್ಷಿ ಆಗಮಿಸುವರು.
ಗೌರವಾನ್ವಿತ ಅತಿಥಿಗಳಾಗಿ ನಗರಸಭೆ ಪೌರಾಯುಕ್ತೆ ಎಸ್.ಲಕ್ಷ್ಮಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ರೇಣುಪ್ರಸಾದ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ರವೀಂದ್ರ, ಜಿಲ್ಲಾ ಅಂಧತ್ವ ನಿವಾರಣಾ ಕಾರ್ಯಕ್ರಮ ಅಧಿಕಾರಿ ಡಾ.ನಾಗರಾಜ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್ ಭಾಗವಹಿಸುವರು.
ಹೆಚ್ಚಿನ ವಿವರಗಳಿಗಾಗಿ ಶಾಸಕರ ಕಾರ್ಯಾಲಯ 9591515031/7996768003, ಶಂಕರ ಕಣ್ಣಿನ ಆಸ್ಪತ್ರೆ. 08182-222099/08182-2221000 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.






