ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 12 : ಮಾಳಪ್ಪನಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ, ನೆಹರು ಯುವ ಕೇಂದ್ರ, ರೋಟರಿ ಕ್ಲಬ್ ಚಿನ್ಮುಲಾದ್ರಿ, ಬಸಪ್ಪ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ನೀಲಕಂಠಯ್ಯ ಮೆಮೋರಿಯಲ್ ಪ್ಯಾರಾ ಮೆಡಿಕಲ್ ಕಾಲೇಜು ಸಹಯೋಗದೊಂದಿಗೆ ಮಕ್ಕಳಿಗೆ ಉಚಿತ ರಕ್ತದ ಗುಂಪಿನ ತಪಾಸಣೆ, ರಕ್ತದಾನ ಶಿಬಿರ, ಆರೋಗ್ಯ ಮತ್ತು ನೇತ್ರ ತಪಾಸಣೆ ನಡೆಸಲಾಯಿತು.
ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಾಳಪ್ಪನಹಟ್ಟಿ ಈಶ್ವರಪ್ಪನವರ ಎಪ್ಪತ್ತನೆ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಉಪ ಸಭಾಪತಿ ಈ.ಅರುಣ್‍ಕುಮಾರ್ 41 ನೇ ಬಾರಿಗೆ ರಕ್ತದಾನ ಮಾಡಿದರು.
ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಜಿಲ್ಲಾ ಕಾರ್ಯದರ್ಶಿ ಮಜಹರ್‍ಉಲ್ಲಾ, ಮಂಜುನಾಥ್ ಭಾಗವತ್, ಗಣೇಶಯ್ಯ, ನೆಹರು ಯುವ ಕೇಂದ್ರದ ಸುಹಾಸ್, ಗುರುಮೂರ್ತಿ, ಮಾರುತಿ, ಅಶೋಕ್, ಕಿರಣ್, ವೈದ್ಯರುಗಳಾದ ರವಿ, ನವೀನ್‍ಸಜ್ಜನ್, ಶಿಲ್ಪ, ರೂಪ ಇವರುಗಳು ಮಕ್ಕಳ ಆರೋಗ್ಯ ತಪಾಸಣೆ ನಡೆಸಿದರು. ಶಾಲೆಯ ಸಿಬ್ಬಂದಿ ವರ್ಗದವರು ಹಾಗೂ ಮಾಳಪ್ಪನಹಟ್ಟಿ ಗ್ರಾಮದ ಮುಖಂಡರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.




















