ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮೇ. 14 : ಇನ್ನರ್‍ವೀಲ್ ಕ್ಲಬ್ ಚಿತ್ರದುರ್ಗ, ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆ ಸಹಯೋಗದೊಂದಿಗೆ ಸೀಬಾರದಲ್ಲಿರುವ ವಿಶ್ವಮಾನವ ಶಾಲೆಯಲ್ಲಿ ಮೇ.16 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಹೃದಯ ರೋಗ, ನರ ರೋಗ, ಮೂತ್ರ ಪಿಂಡದಲ್ಲಿರುವ ಕಲ್ಲು ಹಾಗೂ ಕ್ಯಾನ್ಸರ್ ಕಾಯಿಲೆಗಳಿಗೆ ಸಂಬಂಧಿಸಿದಂತೆ ಉಚಿತವಾಗಿ ತಪಾಸಣೆ ನಡೆಸಿ ಸೂಕ್ತ ಸಲಹೆಗಳನ್ನು ನೀಡಲಾಗುವುದು. ಶಿಬಿರಕ್ಕೆ ಬರುವವರು ಕಡ್ಡಾಯವಾಗಿ ಬಿ.ಪಿ.ಎಲ್. ರೇಷನ್ ಕಾರ್ಡ್ ಹಾಗೂ ಆಧಾರ್ ಕಾರ್ಡ್‍ಗಳನ್ನು ತರತಕ್ಕದ್ದು. ಸೀಬಾರ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಇನ್ನರ್ ವೀಲ್ಹ್ ಕ್ಲಬ್ ಅಧ್ಯಕ್ಷೆ ವೀಣ ಜಯರಾಂ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ : 9440337944, 9740643211, 9986575346 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.










