Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಉಚಿತ ಯೋಗ, ಧ್ಯಾನ ಮತ್ತು ಪ್ರಾಣಾಯಾಮ ತರಬೇತಿ ಶಿಬಿರ

---Advertisement---

 

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 27 : ಪತಂಜಲಿ ಯೋಗ ಸಮಿತಿ, ಭಾರತ ಸ್ವಾಭಿಮಾನ ಟ್ರಸ್ಟ್ ಮಹಿಳಾ ಪತಂಜಲಿ ಯೋಗ ಸಮಿತಿ, ಯುವ ಭಾರತ್, ಪತಂಜಲಿ ಕಿಸಾನ್ ಸೇವಾ ಸಮಿತಿ ಹಾಗೂ ಜ್ಞಾನದೀಪ ವಿದ್ಯಾಮಂದಿರ ಇವರ ಸಂಯುಕ್ತಾಶ್ರಯದಲ್ಲಿ 15 ದಿನಗಳ ಕಾಲ ಉಚಿತ ಯೋಗ, ಧ್ಯಾನ ಮತ್ತು ಪ್ರಾಣಾಯಾಮ ತರಬೇತಿ ಶಿಬಿರವನ್ನು ಮಾರ್ಚ್ 02 ರಿಂದ 16 ರವರೆಗೆ ಬೆಳಿಗ್ಗೆ 5.30 ರಿಂದ 7 ಗಂಟೆಯವರೆಗೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ 5ನೇ ತಿರುವು ಜ್ಞಾನದೀಪ ವಿದ್ಯಾಮಂದಿರದಲ್ಲಿ ಆಯೋಜಿಸಲಾಗಿದೆ.

ಮಾರ್ಚ್ 02ರಂದು ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ನಗರಸಭೆ ಸದಸ್ಯ ಹೆಚ್.ಶ್ರೀನಿವಾಸ್ ಕಾರ್ಯಕ್ರಮ ಉದ್ಘಾಟನೆ ಮಾಡುವರು. ಜ್ಞಾನದೀಪ ವಿದ್ಯಾಮಂದಿರ ಕಾರ್ಯದರ್ಶಿ ನಾಗರತ್ನ ಟಿ.ಬದರಿನಾಥ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಗುತ್ತಿಗೆದಾರ ಈ.ಶಿವಕುಮಾರ್, ದಾವಣಗೆರೆ ಸಬ್‌ರಿಜಿಸ್ಟರ್ ರಾಮಕೃಷ್ಣಪ್ಪ ಭಾಗವಹಿಸುವರು. ಜಿಲ್ಲಾ ಪತಂಜಲಿ ಯೋಗ ಸಮಿತಿ ಅಧ್ಯಕ್ಷ ಎಂ.ವಿ.ದೇವಾನಂದ ನಾಯ್ಕ್, ಗೌರವಾಧ್ಯಕ್ಷ ಟಿ.ವಿ..ಸರ್ವದ, ಬಿಎಸ್‌ಟಿ ಉಪಾಧ್ಯಕ್ಷ ಲಲಿತಾ ಬೇದ್ರೆ, ಸಂಘಟನಾ ಕಾರ್ಯದರ್ಶಿ ಜೆ.ಎಸ್.ಗುರುಮೂರ್ತಿ ಉಪಸ್ಥಿತಿವಹಿಸುವರು.
ಯೋಗಶಿಕ್ಷಕರಾದ ಶ್ರೀನಿವಾಸ್, ಎನ್.ಕೆಂಚವೀರಪ್ಪ, ಶ್ರೀಧರ್, ಲಲಿತಾ ಬೇದ್ರೆ, ವೀರೇಶ್, ತಿಪ್ಪೇಸ್ವಾಮಿ, ಶಿವಸ್ವಾಮಿ, ಹೊರಕೇರಪ್ಪ ಅವರು ಶಿಬಿರ ನಡೆಸಿಕೊಡುವರು. ಹೆಚ್ಚಿನ ಮಾಹಿತಿಗಾಗಿ 8453462044, 9901585905 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...