Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಇಂದಿನಿಂದ ಫಲ-ಪುಷ್ಪ ಪ್ರದರ್ಶನ

---Advertisement---

 

ಚಿತ್ರದುರ್ಗ. ಫೆ.15 : ತೋಟಗಾರಿಕೆ ಇಲಾಖೆ, ಜಿಲ್ಲಾ ತೋಟಗಾರಿಕೆ ಸಂಘ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ (ಫೆ.15 ರಿಂದ 17 ರವರೆಗೆ) ಫಲ-ಪುಷ್ಪ ಪ್ರದರ್ಶನ ಏರ್ಪಡಿಸಲಾಗಿದ್ದು, ಸಂಜೆ 6ಕ್ಕೆ ನಗರದ ವಿ.ಪಿ.ಬಡಾವಣೆಯ ತೋಟಗಾರಿಕೆ ಇಲಾಖೆ ಆವರಣದಲ್ಲಿ “32ನೇ ಫಲ-ಪುಷ್ಪ ಪ್ರದರ್ಶನದ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟಿಸುವರು. ಸಂಸದ ಗೋವಿಂದ ಎಂ.ಕಾರಜೋಳ ಘನಪಸ್ಥಿತಿವಹಿಸುವರು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಶಾಸಕರಾದ ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಎನ್.ವೈ.ಗೋಪಾಲಕೃಷ್ಣ, ಎಂ.ಚಂದ್ರಪ್ಪ, ವಿಧಾನ ಪರಿಷತ ಸದಸ್ಯರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ರಾಜ್ಯ ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ನಗರಸಭೆ ಅಧ್ಯಕ್ಷೆ ಬಿ.ಎನ್.ಸುಮಿತಾ ರಾಘವೇಂದ್ರ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎನ್.ಆರ್.ಮಹೇಶ್ವರಪ್ಪ, ಜಿಲ್ಲಾ ಹಾಪ್‍ಕಾಮ್ಸ್ ಅಧ್ಯಕ್ಷ ಕೆ.ಎಂ.ತಿಪ್ಪೇಸ್ವಾಮಿ ಭಾಗವಹಿಸುವರು. ವಿಶೇಷ ಆಹ್ವಾನಿತರಾಗಿ ತೋಟಗಾರಿಕೆ ಮತ್ತು ರೇಷ್ಮೆ ಸರ್ಕಾರದ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಅದಿತ್ಯ ಬಿಸ್ವಾಸ್,  ತೋಟಗಾರಿಕೆ ಇಲಾಖೆ ನಿರ್ದೇಶಕ ಡಿ.ಎಸ್.ರಮೇಶ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಸೇರಿದಂತೆ ಮತ್ತಿತರರು ಭಾಗವಹಿಸುವರು ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಜಿ.ಸವಿತಾ ತಿಳಿಸಿದ್ದಾರೆ.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...