ಚಿತ್ರದುರ್ಗ. ಫೆ.15 : ತೋಟಗಾರಿಕೆ ಇಲಾಖೆ, ಜಿಲ್ಲಾ ತೋಟಗಾರಿಕೆ ಸಂಘ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ (ಫೆ.15 ರಿಂದ 17 ರವರೆಗೆ) ಫಲ-ಪುಷ್ಪ ಪ್ರದರ್ಶನ ಏರ್ಪಡಿಸಲಾಗಿದ್ದು, ಸಂಜೆ 6ಕ್ಕೆ ನಗರದ ವಿ.ಪಿ.ಬಡಾವಣೆಯ ತೋಟಗಾರಿಕೆ ಇಲಾಖೆ ಆವರಣದಲ್ಲಿ “32ನೇ ಫಲ-ಪುಷ್ಪ ಪ್ರದರ್ಶನದ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟಿಸುವರು. ಸಂಸದ ಗೋವಿಂದ ಎಂ.ಕಾರಜೋಳ ಘನಪಸ್ಥಿತಿವಹಿಸುವರು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಶಾಸಕರಾದ ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಎನ್.ವೈ.ಗೋಪಾಲಕೃಷ್ಣ, ಎಂ.ಚಂದ್ರಪ್ಪ, ವಿಧಾನ ಪರಿಷತ ಸದಸ್ಯರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ರಾಜ್ಯ ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ಎಸ್.ಮಂಜುನಾಥ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ನಗರಸಭೆ ಅಧ್ಯಕ್ಷೆ ಬಿ.ಎನ್.ಸುಮಿತಾ ರಾಘವೇಂದ್ರ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎನ್.ಆರ್.ಮಹೇಶ್ವರಪ್ಪ, ಜಿಲ್ಲಾ ಹಾಪ್‍ಕಾಮ್ಸ್ ಅಧ್ಯಕ್ಷ ಕೆ.ಎಂ.ತಿಪ್ಪೇಸ್ವಾಮಿ ಭಾಗವಹಿಸುವರು. ವಿಶೇಷ ಆಹ್ವಾನಿತರಾಗಿ ತೋಟಗಾರಿಕೆ ಮತ್ತು ರೇಷ್ಮೆ ಸರ್ಕಾರದ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಅದಿತ್ಯ ಬಿಸ್ವಾಸ್, ತೋಟಗಾರಿಕೆ ಇಲಾಖೆ ನಿರ್ದೇಶಕ ಡಿ.ಎಸ್.ರಮೇಶ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಸೇರಿದಂತೆ ಮತ್ತಿತರರು ಭಾಗವಹಿಸುವರು ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಜಿ.ಸವಿತಾ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















