Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಅದ್ದೂರಿಯಾಗಿ ನೆರವೇರಿದ ಚನ್ನಕೇಶವಸ್ವಾಮಿಯ ರಥೋತ್ಸವ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.24 : ಆಕಾಶವಾಣಿ ಸಮೀಪವಿರುವ ಚನ್ನಕೇಶವಸ್ವಾಮಿಯ ರಥೋತ್ಸವ ಶನಿವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.

ಶ್ರೀದೇವಿ ಭೂದೇವಿಯನ್ನು ರಥದಲ್ಲಿ ಕೂರಿಸಿ ವಿಶೇಷವಾಗಿ ಅಲಂಕರಿಸಿದ ನಂತರ ನೆರೆದಿದ್ದ ಭಕ್ತರು ರಥವನ್ನು ಎಳೆದಾಗ ಮಂಡಕ್ಕಿ ತೂರಿ ಭಕ್ತಿ ಸಮರ್ಪಿಸಲಾಯಿತು.
ತಿಪಟೂರಿನ ವಿನಾಯಕ ನಾದಸ್ವರದ ಮಂಜುಳ ಬಸವರಾಜ್ ಮತ್ತು ತಂಡದವರ ನಾದಸ್ವರ ಹಾಗೂ ತಬಲ ರಥೋತ್ಸವಕ್ಕೆ ಮೆರಗು ನೀಡಿತು.

ಮಾಜಿ ಶಾಸಕ ಎಸ್.ಕೆ.ಬಸವರಾಜನ್, ಶಾಸಕ ಕೆ.ಸಿ.ವೀರೇಂದ್ರಪಪ್ಪಿರವರ ಸಹೋದರ ಕೆ.ಡಿ.ಪಿ.ಸದಸ್ಯ ಕೆ.ಸಿ.ನಾಗರಾಜ್, ಹಿರಿಯ ನ್ಯಾಯವಾದಿ ಫಾತ್ಯರಾಜನ್,
ಮಾರುತೇಶ್‍ರೆಡ್ಡಿ, ನಗರಸಭೆ ಮಾಜಿ ಸದಸ್ಯ ಡಿ.ಪ್ರಕಾಶ್ ಇನ್ನು ಅನೇಕರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment