ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಬ್ಯಾಂಕ್ ಕಾಲೋನಿ ನಿವಾಸಿ ಜಿ.ಪಿ.ಉಮೇಶ್(63) ಬುಧವಾರ ಬೆಳಿಗ್ಗೆ 11-30 ಕ್ಕೆ ಹೃದಯಾಘಾತದಿಂದ ನಿಧನರಾದರು.
ಕಂದಾಯ ಪಾವತಿಸಲು ನಗರಸಭೆಗೆ ಹೋಗಿದ್ದಾಗ ಕುಸಿದು ಬಿದ್ದ ಜಿ.ಪಿ.ಉಮೇಶ್‍ರನ್ನು ಸ್ನೇಹಿತರು ಅವರ ಮನೆಗೆ ಕರೆದುಕೊಂಡು ಹೋಗಿ ಅಲ್ಲಿಂದ ಆಸ್ಪತ್ರೆಗೆ ಹೋಗುವಷ್ಟರಲ್ಲಿ ಕೊನೆಯುಸಿರೆಳೆದರು. ಟೈಲ್ಸ್ ಮತ್ತು ಗ್ರಾನೈಟ್ ಗುತ್ತಿಗೆದಾರರಾಗಿದ್ದ ಜಿ.ಪಿ.ಉಮೇಶ್ ಪತ್ನಿ, ಓರ್ವ ಪುತ್ರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಜೋಗಿಮಟ್ಟಿ ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಗುರುವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











