Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಜಿ.ಆರ್. ಹಳ್ಳಿ ಬಳಿ ಕಾರಿಗೆ ಕಾರು ಡಿಕ್ಕಿ : 8 ಮಂದಿಗೆ ಗಾಯ

---Advertisement---

 

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 25 : ರಾಷ್ಟ್ರೀಯ ಹೆದ್ದಾರಿ 13ರ ಗುಡ್ಡದ ರಂಗವ್ವನಹಳ್ಳಿ ಸಮೀಪದ CNG ಪೆಟ್ರೋಲ್ ಬಂಕ್ ಬಳಿ ನಿನ್ನೆ ರಾತ್ರಿ (ಭಾನುವಾರ) 10 ಗಂಟೆ ಸಮಯದಲ್ಲಿ ಇನೋವಾ ಕಾರು ಹಾಗೂ ಫಾರ್ಚುನರ್ ಕಾರು ಪರಸ್ಪರ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ವೇಳೆ 8 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ತಾಲ್ಲೂಕಿನ ಗುಡ್ಡದ ರಂಗವ್ವಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಹೊಸಪೇಟೆ ಕಡೆಯಿಂದ ಬಂದ ಇನ್ನೋವಾ ಕಾರಿಗೆ ಯೂಟರ್ನ್ ತೆಗೆದುಕೊಳ್ಳುವಾಗ ಫಾರ್ಚೂನರ್ ಕಾರು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಇನೋವಾ ಕಾರು ಜಖಂಗೊಂಡಿದೆ. ಕಾರಿನಲ್ಲಿದ್ದ ಒಂದೇ ಕುಟುಂಬದ 8 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಮಂತ್ರಾಲಯಕ್ಕೆ ಹೋಗಿ ರಾಯರ ದರ್ಶನ ಪಡೆದು ವಾಪಾಸ್ ದಾಬಸ್ ಪೇಟೆ ಕಡೆಗೆ ಹೋಗುವ ಮಾರ್ಗದಲ್ಲಿ ಗುಡ್ಡದ ರಂಗವ್ವನಹಳ್ಳಿ ಬಳಿ ಈ ಅವಘಡ ಸಂಭವಿಸಿದೆ‌. ಈ ಘಟನೆಯಲ್ಲಿ ಗಾಯಗೊಂಡವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment