ಚಿತ್ರದುರ್ಗ | ಥ್ರೋ ಬಾಲ್ ಕ್ರೀಡಾಕೂಟದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಗೌಡಿಹಳ್ಳಿ ಪ್ರೌಢಶಾಲಾ ವಿದ್ಯಾರ್ಥಿನಿಯರು

1 Min Read

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್ ‌.28 : ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಗೌಡಿಹಳ್ಳಿಯ ಶ್ರೀ ಬಸವೇಶ್ವರ ಗ್ರಾಮಾಂತರ ಪ್ರೌಢಶಾಲೆಯ ವಿದ್ಯಾರ್ಥಿನಿಯರು ರಾಜ್ಯಮಟ್ಟದ 17 ವರ್ಷ ವಯೋಮಿತಿ ಒಳಗಿನ ಥ್ರೋ ಬಾಲ್ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸುತ್ತಾ ರಾಷ್ಟ್ರಮಟ್ಟದ ಕ್ರೀಡಾಸ್ಪರ್ಧೆಯಲ್ಲಿ ಆಯ್ಕೆಯಾಗಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನಲ್ಲಿ ಶಾಲಾ ಶಿಕ್ಷಣ ಇಲಾಖೆಯಿಂದ ಡಿಸೆಂಬರ್ 26  ಮತ್ತು 27 ರಂದು  ರಾಜ್ಯಮಟ್ಟದ 17 ವರ್ಷ ವಯೋಮಿತಿ ಒಳಗಿನ ಥ್ರೋ ಬಾಲ್ ಕ್ರೀಡಾಕೂಟ ನೆರವೇರಿತು.

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಾದ ಸ್ವಪ್ನ,  ಸಾರಿಕಾ, ಮನವಿ, ಮಾನ್ಯ, ಐಶ್ವರ್ಯ, ಸಾಕ್ಷಿ ,ರಮ್ಯಾ ಇವರಿಗೆ
ಡಿಡಿಪಿಐ ರವಿಶಂಕರ್ ರೆಡ್ಡಿ, ಎ ಪರಶುರಾಮಪ್ಪ, ವಿಭಾಗೀಯ ಉಪ ನಿರ್ದೇಶಕರು (ದೈಹಿಕ ಶಿಕ್ಷಣ) ಮೈಸೂರು, ಚಿದಾನಂದ ಸ್ವಾಮಿ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ,ಎಂ ಎಚ್ ಜಯಣ್ಣ ವಿಶ್ರಾಂತ ದೈಹಿಕ ಶಿಕ್ಷಣ ಅಧಿಕಾರಿ, ಸುನಿಲ್ ನಾಯ್ಕ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರು ಚಳ್ಳಕೆರೆ .ಶಾಲೆಯ ಮುಖ್ಯ ಶಿಕ್ಷಕರಾದ  ರಾಮಚಂದ್ರಪ್ಪ, ದೈಹಿಕ ಶಿಕ್ಷಣ ಶಿಕ್ಷಕರಾದ ಶಿವಕುಮಾರ್ ಅವರು ಜಿಲ್ಲಾ ಉಪ ನಿರ್ದೇಶಕರ ಕಚೇರಿಯಿಂದ ಅಭಿನಂದಿಸಿರುತ್ತಾರೆ.

Share This Article
Leave a Comment

Leave a Reply

Your email address will not be published. Required fields are marked *