Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಹಳೆಯ ನೆನಪು ಮರುಕಳಿಸಿದ ಬಿಎಸ್‌ವೈ ಲಕ್ಕಿ ‘ಅಂಬಾಸಿಡರ್’ ಕಾರ್!

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಮೇ 08 : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಬಿಎಸ್‍ವೈ ಅಭಿಮಾನೋತ್ಸವ’ ಕಾರ್ಯಕ್ರಮಕ್ಕೆ ಕೋಟೆನಾಡು ಚಿತ್ರದುರ್ಗ ಅದ್ದೂರಿಯಾಗಿ ಸಜ್ಜಾಗಿದೆ ನಗರದ ಮಾದಾರ ಚನ್ನಯ್ಯ ಮಠದ ಸಮೀಪವಿರುವ ವಿಶಾಲವಾದ ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಾಣವಾಗಿದ್ದು, ಲಕ್ಷಾಂತರ ಅಭಿಮಾನಿಗಳು ಈ ಸಮಾವೇಶದಲ್ಲಿ ಭಾಗಿಯಾಗುವ ನಿರೀಕ್ಷೆಯಿದೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಲ್ಗೊಳ್ಳುತ್ತಿದ್ದಾರೆ. ಅಭಿಮಾನೋತ್ಸವದ ಹಿನ್ನೆಲೆಯಲ್ಲಿ ಇಡೀ ಚಿತ್ರದುರ್ಗ ನಗರ ಕೇಸರಿಮಯವಾಗಿದ್ದು, ಎಲ್ಲೆಡೆ ಬಿಎಸ್‍ವೈ, ಅಮಿತ್ ಶಾ ಮತ್ತು ಪ್ರಧಾನಿ ಮೋದಿ ಅವರ ಬ್ಯಾನರ್‍ಗಳು ರಾರಾಜಿಸುತ್ತಿವೆ.

ಮೇ 9ರ ಮಧ್ಯಾಹ್ನ 3 ಗಂಟೆಗೆ ಅಮಿತ್ ಶಾ ಚಿತ್ರದುರ್ಗಕ್ಕೆ ಆಗಮಿಸಲಿದ್ದು, ಅವರಿಗಾಗಿ ವೇದಿಕೆಯ ಹಿಂಭಾಗದಲ್ಲೇ ವಿಶೇಷ ಹೆಲಿಪ್ಯಾಡ್ ನಿರ್ಮಿಸಲಾಗಿದೆ. ಮಠಾಧೀಶರು, ಕೇಂದ್ರ ಹಾಗೂ ರಾಜ್ಯ ನಾಯಕರಿಗೆ ವೇದಿಕೆಯಲ್ಲಿ ಪ್ರತ್ಯೇಕ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಕಾರ್ಯಕ್ರಮಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಬರುವ ಲಕ್ಷಾಂತರ ಜನರಿಗಾಗಿ ಕುಡಿಯುವ ನೀರು, ಬಾಳೆಹಣ್ಣು ಮತ್ತು ಉಪಾಹಾರದ ವ್ಯವಸ್ಥೆಯನ್ನು ಮಾಡಲಾಗಿದೆ.

ನಗರದಲ್ಲಿ ನಾಳೆ ನಡೆಯಲಿರುವ ಬಿಎಸ್‍ವೈ ಅಭಿಮಾನೋತ್ಸವ ಹಿನ್ನೆಲೆ ಮಾಜಿ ಸಿ.ಎಂ ಬಿ.ಎಸ್. ಯಡಿಯೂರಪ್ಪ ಅವರು ಬಳಸಿದ  ಅಂಬಾಸಿಡರ್ ಕಾರನ್ನು ಪ್ರದರ್ಶನಕ್ಕೆ ಇಡಲಾಗಿದೆ. ತಂದೆ ಬಳಸಿದ್ದ ಕಾರಿನ ಬಗ್ಗೆ ಮಾತನಾಡಿದ ಬಿ.ವೈ.ವಿಜಯೇಂದ್ರ, ಯಡಿಯೂರಪ್ಪರನ್ನು ಗುರುತಿಸುವಷ್ಟೇ ಈ ಕಾರನ್ನೂ ಜನ ಗುರುತಿಸುತ್ತಾರೆ. ಅಂದು ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಬಿಜೆಪಿಯನ್ನು ಹಳ್ಳಿ ಹಳ್ಳಿಗಳಿಗೂ ತಲುಪಿಸಲು ಯಡಿಯೂರಪ್ಪನವರಿಗೆ ಈ ಕಾರು ನೆರವಾಗಿದೆ. ಬಿ.ಎಸ್.ವೈ ಸೇರಿ ಪಕ್ಷದ ಅನೇಕ ಪ್ರಮುಖರು ಇದೇ ಕಾರಲ್ಲಿ ತೆರಳಿ ಪಕ್ಷದ ಪ್ರಚಾರ ಮಾಡಿದ್ದರು ಎಂದು ತಿಳಿಸಿದ್ದಾರೆ.

ಬಿಜೆಪಿ ಮುಖಂಡರು, ಯಡಿಯೂರಪ್ಪ ಅಭಿಮಾನಿಗಳು ಕಾರಿನ ವೀಕ್ಷಣೆ ಮಾಡಿದ್ದಲ್ಲದೆ ಅದರ ಜೊತೆ ಸೆಲ್ಫೀ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ.
ಈ ಸಂದರ್ಭದಲ್ಲಿ ಸಂಸದರಾದ ಗೋವಿಂದ  ಕಾರಜೋಳ, ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಎಸ್,ಕೆ.ಬಸವರಾಜನ್, ರಾಜ್ಯ ಕಾರ್ಯದರ್ಶಿ ತಮೇಶ್ ಗೌಡ್ರು ಸೇರಿದಂತೆ ಇತರರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...