Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : 23 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 08 : ವರಮಹಾಲಕ್ಷ್ಮೀ ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಅಘಾತವಾಗಿದೆ. ಮನೆಯಲ್ಲಿದ್ದ ಸುಮಾರು ರೂಪಾಯಿ 23 ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿ ಸಾಮಾನುಗಳನ್ನು ಕಳುವಾಗಿರುವ ಘಟನೆ ನಗರದ ದೊಡ್ಡಪೇಟೆಯಲ್ಲಿ ನಡೆದಿದೆ.

ನಗರದ ದೊಡ್ಡಪೇಟೆಯ ಪ್ರೇಮಾ ರಾಜಾರಾವ್ ಅವರ ಮನೆಯಲ್ಲಿ ಈ ದರೋಡೆ ನಡೆದಿದೆ. ಹಬ್ಬದ ಕೆಲ ದಿನಗಳ ಮುಂಚೆ ಮನೆಯವರು ಬೇರೆ ಊರಿಗೆ ಹೋಗಿದ್ದರು. ನಿನ್ನೆ ರಾತ್ರಿ (ಆಗಸ್ಟ್. 07) ಮನೆಗೆ ಬಂದು ನೋಡಿದಾಗ ಕಳ್ಳತನ ಆಗಿರುವುದು ಗೊತ್ತಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಕಾರಣ ಆಗಸ್ಟ್ 05 ನೇ ತಾರೀಖಿನಂದು ಕಳ್ಳತನ ಆಗಿದ್ದು, ನಿನ್ನೆ ಮನೆಗೆ ಬಂದಾಗಲೇ ಈ ವಿಷಯ ತಿಳಿದು ಬಂದಿದೆ.
ಮನೆ ಬೀಗ ಮುರಿದು ಒಳನುಗ್ಗಿದ ಕಳ್ಳರು ಮನೆಯಲ್ಲಿದ್ದ ಅಂದಾಜು 23 ಲಕ್ಷ ಮೌಲ್ಯದ 200 ಗ್ರಾಂ ತೂಕದ ಚಿನ್ನಾಭರಣ ಹಾಗೂ 6 ಕೆಜಿ ಬೆಳ್ಳಿ ಆಭರಣಗಳು, 6 ಸಾವಿರ ನಗದು, ರೇಷ್ಮೆ ಸೀರೆಗಳು ಕಳುವಾಗಿವೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಚಿತ್ರದುರ್ಗ ನಗರ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಳ್ಳರ ಪತ್ತೆಗೆ ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ರಂಜಿತ್ ಬಂಡಾರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ನಗರಠಾಣೆ CPI ಉಮೇಶ್ ಬಾಬು ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment