ಸುದ್ದಿಒನ್, ಚಿತ್ರದುರ್ಗ , ಮೇ.03 : ಎಸ್ಸೆಸ್ಸೆಲ್ಸಿ 2024-25 ರ ಫಲಿತಾಂಶ ಪ್ರಕಟವಾಗಿದ್ದು, ನ್ಯಾಷನಲ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಕು. ಸೈಯದಾ ನೂರೈನ್ 612 ಅಂಕ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ.
ಕು. ಆಕಾಶ್ ಸಿ ಮತ್ತು ಕು. ಜೈನಬ್ ಎಸ್.ಜಡ್. 611 ಅಂಕ ಪಡೆದು ಶಾಲೆಗೆ ದ್ವಿತೀಯ ಸ್ಥಾನ ಪಡೆದಿರುತ್ತಾರೆ.
ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಕಾರ್ಯದರ್ಶಿ, ಆಡಳಿತಾಧಿಕಾರಿ, ನಿರ್ದೇಶಕರು, ಪ್ರಾಂಶುಪಾಲರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.














