ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 23 : ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗವು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಶೇ 93.85ರಷ್ಟು ಫಲಿತಾಂಶ ದಾಖಲಿಸಿ ಸಾಧನೆ ಮಾಡಿದೆ. ಶಾಲೆಯಲ್ಲಿ ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 114 ವಿದ್ಯಾರ್ಥಿನಿಯರಲ್ಲಿ 107 ಮಂದಿ ಉತ್ತೀರ್ಣರಾಗಿದ್ದಾರೆ.
ಉತ್ತೀರ್ಣರಾದವರಲ್ಲಿ 10 ವಿದ್ಯಾರ್ಥಿನಿಯರು ಅತ್ಯುನ್ನತ ಶ್ರೇಣಿ, 41 ವಿದ್ಯಾರ್ಥಿನಿಯರು ಪ್ರಥಮ ದರ್ಜೆ, 27 ವಿದ್ಯಾರ್ಥಿನಿಯರು ದ್ವಿತೀಯ ದರ್ಜೆ ಹಾಗೂ 29 ವಿದ್ಯಾರ್ಥಿನಿಯರು ತೃತೀಯ ದರ್ಜೆಯಲ್ಲಿ ಪಾಸಾಗಿದ್ದಾರೆ. ಈ ಬಾರಿ ರಾಜ್ಯದ ಸರಾಸರಿ ಫಲಿತಾಂಶ ಶೇ 94.1ರಷ್ಟಿದ್ದರೆ, ಜಿಲ್ಲೆಯ ಸರಾಸರಿ ಶೇ 92.25ರಷ್ಟಿದೆ. ಶಾಲೆಯ ಈ ಯಶಸ್ಸಿಗೆ ಶ್ರಮಿಸಿದ ಎಲ್ಲಾ ಶಿಕ್ಷಕರಿಗೆ ಮತ್ತು ಸಾಧನೆ ಮಾಡಿದ ವಿದ್ಯಾರ್ಥಿನಿಯರಿಗೆ ಶಾಲೆಯ ಉಪ ಪ್ರಾಂಶುಪಾಲರು ಹಾಗೂ ಎಸ್‌ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















