Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆ : ಚಿತ್ರದುರ್ಗದ ಜಿ.ಪಿ.ಕುಮಾರ್ ಗೆ ಗೆಲುವು

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 01 : ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (karnataka film chamber of commerce) ಚುನಾವಣೆ ನಿನ್ನೆ (ಜನವರಿ 31) ನಡೆದಿತ್ತು.

ಬೆಂಗಳೂರಿನಲ್ಲಿ ನಡೆದ ಈ ಚುನಾವಣೆಯಲ್ಲಿ ಪ್ರದರ್ಶಕ ವಲಯದಿಂದ ಕಾರ್ಯಕಾರಿ ಸಮಿತಿಗೆ ಸ್ಪರ್ಧಿಸಿದ್ದ ಚಲನಚಿತ್ರ ಪ್ರದರ್ಶಕರು ಮತ್ತು ವಿತರಕರು ಚಿತ್ರದುರ್ಗದ ಶಂಕರ್ ಟಾಕೀಸ್‍ನ ಜಿ.ಪಿ.ಕುಮಾರ್ ಜಯಶಾಲಿಯಾಗಿದ್ದಾರೆ.

ಅಧ್ಯಕ್ಷರಾಗಿ ಭಾಮಾ ಹರೀಶ್ ವಿರುದ್ಧ ಜಯಮಾಲ ಅವರು ಗೆಲುವು ಸಾಧಿಸಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಒಟ್ಟು 813 ಮತಗಳು ಈ ಬಾರಿ ಚಲಾವಣೆ ಆಗಿದ್ದು, ಅವುಗಳಲ್ಲಿ 512 ಮತಗಳನ್ನು ಜಯಮಾಲ ಪಡೆದುಕೊಂಡು ಗೆಲುವು ಸಾಧಿಸಿದ್ದಾರೆ. ಆ ಮೂಲಕ ಮುಂದಿನ ಅವಧಿಗೆ ವಾಣಿಜ್ಯ ಮಂಡಳಿ ಅಧ್ಯಕ್ಷೆಯಾಗಿ ಜಯಮಾಲ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಜಯಮಾಲ ಅವರು ಎರಡನೇ ಬಾರಿ ಫಿಲಂ ಚೇಂಬರ್​​ನ ಅಧ್ಯಕ್ಷೆಯಾಗಿದ್ದಾರೆ. 2008ರಲ್ಲಿ ಹಿರಿಯ ನಟಿ ಜಯಮಾಲ ಅವರು ಮಂಡಳಿಯ ಅಧ್ಯಕ್ಷರಾಗಿ ಆಯ್ಕೆ ಆಗಿದ್ದರು. ಈಗ ಮತ್ತೊಮ್ಮೆ ಅಧ್ಯಕ್ಷೆ ಆಗಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now