ಚಿತ್ರದುರ್ಗ, (ಏ.30) : ರಾಜ್ಯ ಚುನಾವಣಾ ಆಯೋಗವು ಚಿತ್ರದುರ್ಗ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ, ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿದೆ.
ಚುನಾವಣಾ ವೇಳಾಪಟ್ಟಿ ವಿವರ ಇಂತಿದೆ. ಮೇ 05ರಂದು ಚುನಾವಣಾ ಅಧಿಸೂಚನೆ ಹೊರಡಿಸಲಾಗುವುದು.
ಮೇ 10 ರಂದು ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ.
ಮೇ 11ರಂದು ನಾಮಪತ್ರಗಳ ಪರಿಶೀಲನೆ, ಮೇ 13 ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಮತದಾನ ಅವಶ್ಯವಿದ್ದರೆ ಮೇ 20ರಂದು ಬೆಳಿಗ್ಗೆ 7 ರಿಂದ ಸಂಜೆ 5 ರವರೆಗೆ ಮತದಾನ ನಡೆಸಲಾಗುವುದು. ಮರು ಮತದಾನದ ಅವಶ್ಯಕತೆ ಇದ್ದರೆ ಮೇ 21ರಂದು ಬೆಳಿಗ್ಗೆ 7 ರಿಂದ ಸಂಜೆ 5 ರವರೆಗೆ ಮತದಾನ ನಡೆಸಲಾಗುವುದು. ಮೇ22ರಂದು ಬೆಳಿಗ್ಗೆ 8 ಗಂಟೆಯಿಂದ ತಾಲ್ಲೂಕು ಕೇಂದ್ರದಲ್ಲಿ ಮತ ಎಣಿಕೆ ನಡೆಯುವುದು. ಮೇ22ರಂದು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.
ಚುನಾವಣಾ ನಡೆಯುವ ಗ್ರಾಮ ಪಂಚಾಯಿತಿ ಹಾಗೂ ಸದಸ್ಯ ಸ್ಥಾನಗಳ ವಿವರ ಇಂತಿದೆ.
ಮೊಳಕಾಲ್ಮೂರು ತಾಲ್ಲೂಕಿನ ರಾಯಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯರ್ರೇನಹಳ್ಳಿ-1 ಸ್ಥಾನ (ಅನುಸೂಚಿತ ಪಂಗಡ),
ಚಳ್ಳಕೆರೆ ತಾಲ್ಲೂಕಿನ ಚೆನ್ನಮ್ಮನಾಗತಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚನ್ನಮ್ಮನಾಗತಿಹಳ್ಳಿ-2 ಕ್ಷೇತ್ರ-1 ಸ್ಥಾನ (ಸಾಮಾನ್ಯ),
ಚಿತ್ರದುರ್ಗ ತಾಲ್ಲೂಕಿನ ಯಳಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲ್ಲೇಹಾಳ್-1 ಸದಸ್ಯ ಸ್ಥಾನ (ಸಾಮಾನ್ಯ) ಹಾಗೂ
ಹೊಳಲ್ಕೆರೆ ತಾಲ್ಲೂಕಿನ ಶಿವಗಂಗ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿವಗಂಗ-1 ಕ್ಷೇತ್ರದ 1 ಸದಸ್ಯ ಸ್ಥಾನ (ಸಾಮಾನ್ಯ ಮಹಿಳೆ)ಕ್ಕೆ ಉಪಚುನಾಣೆ ನಿಗಧಿಯಾಗಿದ್ದು, ಚುನಾವಣೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.