Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ವಿದ್ಯಾ ವಿಕಾಸ ಅಕಾಡೆಮಿಯಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ

---Advertisement---

 

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 15 : ನಗರದ ವಿದ್ಯಾ ವಿಕಾಸ ಅಕಾಡೆಮಿಯಲ್ಲಿ ಭಾರತದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಸಂಭ್ರಮ, ದೇಶಭಕ್ತಿ ಮತ್ತು ಉತ್ಸಾಹದಿಂದ ಆಚರಿಸಲಾಯಿತು.

ಕಾರ್ಯಕ್ರಮವು ಬೆಳಿಗ್ಗೆ 7:45 ಗಂಟೆಗೆ ಧ್ವಜಾರೋಹಣ ಸಮಾರಂಭದೊಂದಿಗೆ ಆರಂಭವಾಯಿತು. ಧ್ವಜಾರೋಹಣವನ್ನು ಗೌರವಪೂರ್ವಕವಾಗಿ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ವಿಜಯ್ ಕುಮಾರ್ ಬಿ ರವರು ನೆರವೇರಿಸಿದರು . ನಂತರ ರಾಷ್ಟ್ರಗೀತೆ ಹಾಡಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಶ್ರೀ ಹೊನ್ನಾಳಿ ರೆಡ್ಡಿ, ಮಾಜಿ ಸೈನಿಕರು, ಚಿತ್ರದುರ್ಗ ಅವರು ಆಗಮಿಸಿ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿದ್ಯಾ ವಿಕಾಸ ಅಕಾಡೆಮಿಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ವಿಜಯ್ ಕುಮಾರ್ ಬಿ.,, ಅವರು ವಹಿಸಿದ್ದರು. ಗೌರವಾನ್ವಿತ ಅತಿಥಿಗಳಾಗಿ ಕಾರ್ಯದರ್ಶಿಗಳಾದ ಶ್ರೀ ಪೃಥ್ವಿಶ್ ಎಸ್. ಎಂ. ಸಂಸ್ಥೆಯ ಟ್ರಸ್ಟಿ ಗಳಾದ ಶ್ರೀಮತಿ ಸ್ನೇಹಾ ಎನ್. ಎಸ್.,, ಹಾಗೂ ಶ್ರೀಮತಿ ಸುನಿತಾ ಪಿ. ಸಿ., ಅವರು ಉಪಸ್ಥಿತರಿದ್ದರು. ಸಂಸ್ಥೆಯ ಪ್ರಾಂಶುಪಾಲರಾದ ಶ್ರೀ ಪ್ರದೀಶ್ ಕೆ.,, ಹಾಗೂ ನಿವೃತ್ತ ಪ್ರಾಂಶುಪಾಲರಾದ ಶ್ರೀ ಮಂಜಪ್ಪ ರವರು ಸಹ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಮುಖ್ಯ ಅತಿಥಿಗಳಾದ ಹೊನ್ನಾಳಿ ರೆಡ್ಡಿ ಅವರು ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ ದೇಶಭಕ್ತಿ, ಶಿಸ್ತು, ಜವಾಬ್ದಾರಿ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವಜನರ ಪಾತ್ರದ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು. ಮಾಜಿ ಸೈನಿಕರಾಗಿ ತಮ್ಮ ಅನುಭವಗಳನ್ನು ಹಂಚಿಕೊಂಡ ಅವರು, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗವನ್ನು ಸ್ಮರಿಸಿ, ದೇಶದ ಪ್ರಗತಿಗೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

 

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು ವಿಜಯ ಕುಮಾರ ರವರು ಮಾತನಾಡಿ ಪೋಷಕರು ಮಕ್ಕಳಿಗೆ ಓದುವ ಹವ್ಯಾಸವನ್ನು ಬೆಳೆಸಬೇಕು ಇದರಿಂದ ದೇಶಭಕ್ತಿ ಶ್ರದ್ದೆ ಮತ್ತು ಜವಾಬ್ದಾರಿ ಹೆಚ್ಚಾಗುತ್ತದೆ ಎಂದರು.

 

ಸಂಸ್ಥೆಯ ಕಾರ್ಯದರ್ಶಿಗಳಾದ ಪೃಥ್ವಿಶ್ ಎಸ್ ಎಂ ರವರು ಮಾತನಾಡುತ್ತಾ ಈ ಪೀಳಿಗೆಯ ಮಕ್ಕಳು ದೇಶಭಕ್ತಿಯನ್ನು ರೂಢಿಸಿಕೊಳ್ಳಬೇಕು ಮತ್ತು ಪೋಷಕರು ಮಕ್ಕಳನ್ನು ಬೆಳೆಸುವ ಹಂತದಲ್ಲಿಯೇ ದೇಶಭಕ್ತಿಯನ್ನು ಮೂಡಿಸಿಕೊಳ್ಳುವಂತೆ ಬೆಳೆಸಬೇಕು ಎಂದರು.

 

ಬೆಳಿಗ್ಗೆ 10:30 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳು, ನೃತ್ಯಗಳು, ಭಾಷಣಗಳು ಸ್ವಾತಂತ್ರ್ಯ ಹೋರಾಟವನ್ನು ಬಿಂಬಿಸುವ ನೃತ್ಯ ರೂಪಕ ನೆರೆದವರ ಮನಸೂರೆಗೊಳಿಸಿತು ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅತ್ಯಂತ ಉತ್ಸಾಹದಿಂದ ಪ್ರದರ್ಶಿಸಿದರು. ವಿದ್ಯಾರ್ಥಿಗಳ ಪ್ರತಿಭೆ, ಸೃಜನಶೀಲತೆ ಹಾಗೂ ದೇಶಭಕ್ತಿಯ ಭಾವನೆಗಳು ಈ ಕಾರ್ಯಕ್ರಮಗಳ ಮೂಲಕ ಸುಂದರವಾಗಿ ಪ್ರತಿಬಿಂಬಿತವಾದವು.

 

ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಸಂಯೋಜಕರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಪೋಷಕರು ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಇಡೀ ಶಾಲಾ ಆವರಣವು ದೇಶಭಕ್ತಿ, ಏಕತೆ ಮತ್ತು ರಾಷ್ಟ್ರಪ್ರೇಮದ ಭಾವನೆಯಿಂದ ಕಂಗೊಳಿಸಿತು. ಸಾಂಸ್ಕೃತಿಕ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳಲ್ಲಿ ಸ್ವಾತಂತ್ರ್ಯ, ಏಕತೆ, ಶಿಸ್ತು, ಜವಾಬ್ದಾರಿ ಮತ್ತು ರಾಷ್ಟ್ರೀಯ ಸಮಗ್ರತೆಯಂತಹ ಮೌಲ್ಯಗಳನ್ನು ಬೆಳೆಸುವ ಸಂದೇಶವನ್ನು ನೀಡಲಾಯಿತು.
ಕಾರ್ಯಕ್ರಮವನ್ನು ಶಿಕ್ಷಕಿ ಬಿಂದು ಪಾಟೀಲ್ ಮತ್ತು ಶೃತಿ ಎಂ ರವರು ನಿರೂಪಿಸಿದರು ಶಿಕ್ಷಕರಾದ ಅಶೋಕ್ ಎ ಟಿ ರವರು ಸ್ವಾಗತ ಭಾಷಣವನ್ನು ಮತ್ತು ಕಿರಣ್ ಬಾಬು ರವರು ವಂದನಾರ್ಪಣೆಯನ್ನು ನೆರವೇರಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now