Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ವಾತ್ಸಲ್ಯ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ

---Advertisement---

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 04 : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಸಿರಿಗೆರೆ ಯೋಜನಾ ಕಚೇರಿ ವ್ಯಾಪ್ತಿಯ ಮಾಳಪ್ಪನಹಟ್ಟಿ ವಲಯದ ಸೊಲ್ಲಾಪುರ ಗ್ರಾಮದ ವೃದ್ದೆ ನಾಗಮ್ಮನವರಿಗೆ ಮಂಜೂರಾಗಿರುವ ವಾತ್ಸಲ್ಯ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆಯನ್ನು ನೆರವೇರಿಸಲಾಯಿತು.

ಯೋಜನಾಧಿಕಾರಿ ರವಿಚಂದ್ರ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡುತ್ತ ವಾತ್ಸಲ್ಯ ಯೋಜನೆಯಡಿ ವಾತ್ಸಲ್ಯ ಮಿಕ್ಸ್, ಬಟ್ಟೆ, ಪಾತ್ರೆ ಕಿಟ್ ಒಳಗೊಂಡಂತೆ ತಿಂಗಳಿಗೆ  ನೀಡಲಾಗುವ ಒಂದು ಸಾವಿರ ರೂ.ಮಾಶಾಸನ ವೃದ್ದಾಪ್ಯದಲ್ಲಿ ನಿರ್ಗತಿಕರಿಗೆ ನೆರವಾಗಲಿದೆ. ಸೂರು ಕಲ್ಪಿಸುವುದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗಡೆರವರ ಮಹದಾಸೆಯಾಗಿರುವುದರಿಂದ ನಾಗಮ್ಮನಿಗೆ ಮನೆ ನಿರ್ಮಿಸಿ ಕೊಡಲಾಗುತ್ತಿದೆ ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಸದಸ್ಯೆ ಮಂಜುಳ, ವಲಯ ಮೇಲ್ವಿಚಾರಕ ಮೋಹನ್, ಜ್ಞಾನಿವಿಕಾಸ ಸಮನ್ವಯಾಧಿಕಾರಿ ಶಿವಲೀಲಾ ಎಸ್.ಬಾಗೋಡಿ, ಮೇಸ್ತ್ರಿ ವಿಶ್ವನಾಥ್, ಸೇವಾಪ್ರತಿನಿಧಿಗಳು ಈ ಸಂದರ್ಭದಲ್ಲಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...