Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ | ಏಪ್ರಿಲ್ 2 ರಂದು ಶ್ರೀ ವೀರಭದ್ರ ದೇವರ ಗುಗ್ಗುಳ ಮತ್ತು ಅಗ್ನಿಕುಂಡ ಕಾರ್ಯಕ್ರಮ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ಮಾ. 28 : ನಗರದ ವೀರಶೈವ ಸಮಾಜ (ರಿ.)ದವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಸಹಾ ಏ, 2 ರ ಗುರುವಾರದಂದು ನಗರದಲ್ಲಿ ಶ್ರೀ ವೀರಭದ್ರ ದೇವರ ಗುಗ್ಗುಳ ಮತ್ತು ಅಗ್ನಿಕುಂಡ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ವೀರಶೈವ ಸಮಾಜದ ಅಧ್ಯಕ್ಷರಾದ ಎಸ್.ಎಂ.ಎಲ್ ತಿಪ್ಪೇಸ್ವಾಮಿ ತಿಳಿಸಿದ್ದಾರೆ.

ಏ.2ರ ಗುರುವಾರ ಬೆಳಗ್ಗೆ ಹರಪನಹಳ್ಳಿ ಪಟ್ಟಣದ ಮೇಗಳಪೇಟೆ ಶ್ರೀ ಗುಗ್ಗುಳ ವೀರಭದ್ರೇಶ್ವರ ದೇವಸ್ಥಾನ ಸಮಿತಿ ಇವರಿಂದ ಶ್ರೀ ವೀರಭದ್ರ ದೇವರ ಗುಗ್ಗುಳ ಮತ್ತು ಅಗ್ನಿಕುಂಡ ನಡೆಯಲಿದ್ದು, ಬೆಳಗ್ಗೆ 7.00 ಗಂಟೆಗೆ ಗಂಗಾಪೂಜೆಯ ನಂತರ ಉಜ್ಜಯಿನಿ ಮಠದಿಂದ ಹೊರಟು ರಂಗಯ್ಯನಬಾಗಿಲು, ದೊಡ್ಡಪೇಟೆ, ಚಿಕ್ಕಪೇಟೆ, ಆನೆಬಾಗಿಲು, ಮಹಾತ್ಮಗಾಂಧಿ ವೃತ್ತದ ಮುಖಾಂತರವಾಗಿ ಶ್ರೀ ನೀಲಕಂಠೇಶ್ವರಸ್ವಾಮಿ ದೇವಸ್ಥಾನದ ಮುಂಭಾಗದ ಅಗ್ನಿಕುಂಡ ಹಾಯುವುದರ ಮೂಲಕ ಬಿಜಯಂಗೈಯುವುದು. ಮಹಾಮಂಗಳಾರತಿ ನಂತರ ಶ್ರೀ ನೀಲಕಂಠೇಶ್ವರ ಸ್ವಾಮಿ ದೇವಸ್ಥಾನದಲ್ಲಿ ದಾಸೋಹ ಏರ್ಪಡಿಸಲಾಗಿದೆ.

ಗುಗ್ಗುಳ ಮೆರವಣಿಗೆ ಬರುವ ದಾರಿಯಲ್ಲಿ ಭಕ್ತರು ಮನೆಗಳ ಮುಂದೆ ನೀರು, ಹಾಕಿ ರಂಗೋಲಿಯನ್ನು ಹಾಕಿ ಸಹಕರಿಸಿ ಶ್ರೀ ವೀರಭದ್ರಸ್ವಾಮಿ ಮನೆ ದೇವರ ಮನೆತನದವರು, ಗುಗ್ಗುಳದಲ್ಲಿ ಪಾಲ್ಗೊಳ್ಳಲು ಮನವಿ ಮಾಡಿದ್ದು,  ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಶ್ರೀ ವೀರಭದ್ರ ದೇವರ ಗುಗ್ಗುಳ ಮತ್ತು ಅಗ್ನಿಕುಂಡದಲ್ಲಿ ಭಾಗವಹಿಸಿ, ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕಾಗಿ ಮನವಿ ಮಾಡಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now