ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 04 : ಕೆಳಗೋಟೆಯಲ್ಲಿರುವ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಶನಿವಾರ ಬಾಳೆಹಣ್ಣಿನಿಂದ ಅಲಂಕರಿಸಿ ಪೂಜಿಸಲಾಯಿತು.
ಈ ಬಾರಿ ಪಚ್ಚಬಾಳೆಹಣ್ಣಿನ ಗೊನೆಯಿಂದ ಆಂಜನೇಯಸ್ವಾಮಿಯನ್ನು ವಿಶೇಷವಾಗಿ ಸಿಂಗರಿಸಲಾಗಿತ್ತು. ಬೆಳಗಿನಿಂದ ಸಂಜೆಯತನಕ ನೂರಾರು ಭಕ್ತರು ಧಾವಿಸಿ ಆಂಜನೇಯಸ್ವಾಮಿಗೆ ಶ್ರದ್ದಾ ಭಕ್ತಿಯನ್ನು ಸಮರ್ಪಿಸಿದರು.
















