ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 30 : ನಗರದ ಮೆದೇಹಳ್ಳಿ ರಸ್ತೆಯ ಅಗ್ನಿಶಾಮಕ ದಳ ಕಚೇರಿ ಸಮೀಪದ ವಾಸಿಯಾದ ವೈ. ಹನುಮಂತಪ್ಪ (86 ವರ್ಷ) ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ (ಮಾರ್ಚ್.30, ಸೋಮವಾರ) ನಿಧನರಾದರು.

ಮೃತರು ಪತ್ನಿ, ಮೂವರು ಪುತ್ರರು, ಮೂವರು ಪುತ್ರಿಯರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ನಾಳೆ (ಮಾರ್ಚ್. 31, ಮಂಗಳವಾರ) ಬೆಳಗ್ಗೆ 11:30 ಗಂಟೆಗೆ ಜೋಗಿಮಟ್ಟಿ ರಸ್ತೆಯಲ್ಲಿರುವ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
















