ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 22 : ನಗರದ ಜೆಸಿಆರ್ ಬಡಾವಣೆ ನಿವಾಸಿ, ನಿವೃತ್ತ ಸಹಾಯಕ ಕೃಷಿ ಅಧಿಕಾರಿ ಎಸ್. ಹನುಮಂತ ರಾಯ ರೆಡ್ಡಿ (79 ವರ್ಷ) ಅವರು ಅನಾರೋಗ್ಯದಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ನಿಧನರಾದರು.
ಮೃತರು ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ. ಅವರ ಪಾರ್ಥೀವ ಶರೀರ ಇಂದು ಸಂಜೆ ಚಿತ್ರದುರ್ಗಕ್ಕೆ ಬರಲಿದ್ದು ನಾಳೆ ಬೆಳಿಗ್ಗೆ 11 : 30 ರವರೆಗೂ ನಗರದ ಜೆಸಿಆರ್ ಬಡಾವಣೆಯ 6 ನೇ ಕ್ರಾಸ್ ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಂತ್ಯಕ್ರಿಯೆಯನ್ನು ನಾಳೆ(ಅಕ್ಟೋಬರ್. 23) ಮಧ್ಯಾಹ್ನ 3 ಗಂಟೆಗೆ ಅವರ ಸ್ವಗ್ರಾಮವಾದ ಚಳ್ಳಕೆರೆ ತಾಲೂಕಿನ ಪಿ. ಮಹದೇವಪುರದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











