Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಆ.11 ರಿಂದ 15 ರವರೆಗೆ ಹರ್ ಘರ್ ತಿರಂಗ ಅಭಿಯಾನ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಆ. 05 : ಭಾರತೀಯ ಜನತಾ ಪಾರ್ಟಿ, ಚಿತ್ರದುರ್ಗ ಜಿಲ್ಲೆಯ ಜಿಲ್ಲಾ ಕಾರ್ಯಾಲಯದಲ್ಲಿ ಬುಧವಾರ ಮದ್ಯಾಹ್ನ  ಹರ್-ಘರ್ ತಿರಂಗ ಅಭಿಯಾನದ ಪೂರ್ವಭಾವಿ ಸಭೆಯನ್ನು ಜಿಲ್ಲಾಧ್ಯಕ್ಷರಾದ ಕೆ. ಟಿ. ಕುಮಾರಸ್ವಾಮಿ ರವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.

ಈ ವಿಶೇಷ ಸಭೆಯಲ್ಲಿ ಇದೇ ತಿಂಗಳು ಆಗಸ್ಟ್ 11ನೇ 2026 ರಿಂದ ಆಗಸ್ಟ್ 15ನೇ 2026  ರವರೆಗೆ ಹರ್ ಘರ್ ತಿರಂಗ ಅಭಿಯಾನದ ಬಗ್ಗೆ ಕೈಗೊಳ್ಳಬೇಕಾದ ವಿವಿಧ ಕಾರ್ಯಕ್ರಮಗಳ ಬಗ್ಗೆ ವಿಸ್ಕೃತವಾಗಿ ಚರ್ಚೆ ಮಾಡಲಾಯಿತು.

ಈ ಪೂರ್ವಭಾವಿ ಸಭೆಯಲ್ಲಿ ದಾವಣಗೆರೆ ವಿಭಾಗ ಸಹಾ ಪ್ರಭಾರಿಗಳಾದ ಎ ಮುರುಳಿ,  ಜಿಲ್ಲಾ ಉಪಾಧ್ಯಕ್ಷ ರಾದ ಡಾ. ಸಿದ್ದಾರ್ಥ ಗುಂಡಾರ್ಪಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ  ಮಾಧುರಿ ಗಿರೀಶ್, ವೆಂಕಟೇಶ್ ಯಾದವ್, ಡಾ ಪಿ ಎಂ ಮಂಜುನಾಥ ಸೇರಿದಂತೆ ಹರ್ ಘರ್ ತಿರಂಗ ಅಭಿಯಾನದ ಸಂಚಾಲಕರು, ರಾಜ್ಯ, ಜಿಲ್ಲಾ ಮತ್ತು ಮಂಡಲ ಮಟ್ಟದ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now