Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ವಿದ್ಯಾರ್ಥಿಯನ್ನು ಕಾಲಿನಿಂದ ತುಳಿದು ಕ್ರೌರ್ಯ ಮೆರೆದ ಮುಖ್ಯ ಶಿಕ್ಷಕ

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 21 : ವೇದಾಧ್ಯನ ವಿಧ್ಯಾರ್ಥಿ ಪೊಷಕರಿಗೆ ಪೋನ್ ಮಾಡಿದನೆಂಬ ಕ್ಷುಲ್ಲಕ ಕಾರಣಕ್ಕೆ ಮುಖ್ಯ ಶಿಕ್ಷಕ ವೀರೇಶ್ ಹಿರೇಮಠ ಅವರು ವಿದ್ಯಾರ್ಥಿಗೆ ಮನಸೋ ಇಚ್ಚೆ ಥಳಿಸು, ಕಾಲಿಂದ ತುಳಿದು ಜಾಡಿಸಿ ಹೊಡೆದು ಹಲ್ಲೆಮಾಡಿ ಕ್ರೌರ್ಯ ಮೆರೆದಿದ್ದಾನೆ.

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯಲ್ಲಿರುವ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಸಂಸ್ಕೃತ, ವೇದ ವೀರಶೈವಾಗಮ ಪಾಠ ಶಾಲೆಯಲ್ಲಿ ಈ ಘಟನೆ ನಡೆದಿದೆ. ಮುಖ್ಯ ಶಿಕ್ಷಕ ವೀರೇಶ್ ಹಿರೇಮಠ ಎಂಬುವವರು ವಿಧ್ಯಾರ್ಥಿಗೆ ಕಾಲಿನಿಂದ ತಳಿದು ಹಲ್ಲೆ ಮಾಡಿದ್ದಾನೆ. ಬಾಲಕ ಕೈ ಮುಗಿದರೂ ಬಿಡದೆ ಕಾಲಲ್ಲಿ ತುಳಿದು ಮನಸೋ ಇಚ್ಚೆ ಥಳಿಸಿದ್ದಾನೆ. ಪೊಷಕರಿಗೆ ಫೋನ್ ಮಾಡಿದ್ದಕ್ಕೆ ಅಮಾನವೀಯವಾಗಿ ಹಲ್ಲೆ ಮಾಡಿದ್ದಾನೆ.

ನಾಯಕನಹಟ್ಟಿ ಗುರು ತಿಪ್ಪೇರುದ್ರ ಸ್ವಾಮಿ ದೇವಾಲಯದ ಸುಪರ್ದಿಯಲ್ಲಿರುವ ಶಾಲೆ ಇದಾಗಿದ್ದು ವಿದ್ಯಾರ್ಥಿ ಮೇಲೆ ಕ್ರೌರ್ಯ ಮೆರೆದ ಶಿಕ್ಷಕನ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ಎಲ್ಲೆಡೆ ವೈರಲ್ ಆಗಿದೆ. ವಿದ್ಯಾರ್ಥಿಯ ಮೇಲಿನ ಹಲ್ಲೆಗೆ ಸರ್ವಾಜನಿಕ ವಲಯದಲ್ಲಿ ತ್ರೀವ ಆಕ್ರೋಶ ವ್ಯಕ್ತವಾಗುತ್ತಿದೆ.

ವಿದ್ಯಾರ್ಥಿಯನ್ನು ಚಿತ್ರಹಿಂಸೆ ನೀಡಿದ ಮುಖ್ಯ ಶಿಕ್ಷಕ ವೀರೇಶ್ ಹಿರೇಮಠ್ ಮೇಲೆ ಕಾನೂನು ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now