ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 20 : ತಾಲ್ಲೂಕಿನ ಹಾಯ್ಕಲ್ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ನಿರೀಕ್ಷಣಾಧಿಕಾರಿ ಅವಿನಾಶ್ (43 ವರ್ಷ) ಇಂದು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ನಿಧನರಾದರು.
ಕಳೆದ ಶುಕ್ರವಾರ ದ್ವಿಚಕ್ರ ವಾಹನದಲ್ಲಿ ಹೋಗುವಾಗ ಅಪಘಾತವಾಗಿದ್ದು, ತಲೆಗೆ ಪೆಟ್ಟು ಬಿದ್ದು ತೀವ್ರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೂ ಕೂಡಾ ಚಿಕಿತ್ಸೆ ಫಲಿಸದೇ ಇಂದು (ಭಾನುವಾರ) ಸಂಜೆ ಕೊನೆಯುಸಿರೆಳೆದರು.
ಮೃತರು ಪತ್ನಿ, ಓರ್ವ ಪುತ್ರಿ, ಪುತ್ರ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ನಾಳೆ (ಸೋಮವಾರ) ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿ.
ಅವಿನಾಶ್ ಅವರ ಅಕಾಲಿಕ ನಿಧನಕ್ಕೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ನೌಕರರು ಕಂಬನಿ ಮಿಡಿದು ಸಂತಾಪ ಸೂಚಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್