ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ಸುದ್ದಿಒನ್, ಮೊಳಕಾಲ್ಮುರು, ಜುಲೈ. 25 : ವಿದ್ಯುತ್ ಕಂಬಕ್ಕೆ ಸಿಲುಕಿದ್ದ ಪಾರಿವಾಳದ ಪ್ರಾಣ ಉಳಿಸಲು ಹೋಗಿ ಬಾಲಕನೊಬ್ಬ ಪ್ರಾಣ ಕಳೆದುಕೊಂಡಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ. ಮೊಳಕಾಲ್ಮುರು ತಾಲೂಕಿನ ಸಂತೇಗುಡ್ಡ ಗ್ರಾಪಂ ವ್ಯಾಪ್ತಿಯ ಹನುಮಾಪುರ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ.
ಪಾರಿವಾಳವೊಂದು ಆಕಸ್ಮಿಕವಾಗಿ ವಿದ್ಯುತ್ ಕಂಬದ ಮೇಲಿನ ತಂತಿಗೆ ಸಿಲುಕಿತ್ತು. ಮಳೆಗಾಲ ಬೇರೆ ಆಗಿರುವ ಕಾರಣ ವಿದ್ಯುತ್ ಶಾಕ್ ಪಸರಿಸುತ್ತಿದೆ. ಹೀಗಾಗಿ ತಂತಿ ಮೇಲೆ ಕೂತ ಪಾರಿವಾಳಕ್ಕೂ ಕರೆಂಟ್ ಶಾಕ್ ತಗುಲಿ ಜೀವನ್ಮರಣ ಹೋರಾಟ ನಡೆಸುತ್ತಿತ್ತು. ಇದನ್ನು ಕಂಡ ಬಾಲಕ, ಪಾರಿವಾಳವನ್ನು ರಕ್ಷಿಸಲು ಹೋಗಿದ್ದಾನೆ. ಆದರೆ ಈ ವೇಳೆ ಬಾಲಕನಿಗೆ ಕರೆಂಟ್ ಶಾಕ್ ಹೊಡೆದಿದೆ.
12 ವರ್ಷದ ರಾಮಚಂದ್ರ ಸಾವನ್ನಪ್ಪಿದ ಬಾಲಕ. ವಿದ್ಯುತ್ ಕಂಬದ ಮೇಲೇರಿ ಪಾರಿವಾಳವನ್ನು ರಕ್ಷಿಸಲು ಹೋಗಿ ತಾನೇ ಬಲಿಯಾಗಿದ್ದಾನೆ. ತಂತಿಯಲ್ಲಿ ಸಿಲುಕಿದ ಪಾರಿವಾಳವನ್ನು ರಕ್ಷಿಸುವಾಗ ಬಾಲಕನಿಗೆ ವಿದ್ಯುತ್ ಸ್ಪರ್ಶಸಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಕಣ್ಣೆದುರಿಗೆ ಮಗನ ಶವ ವಿದ್ಯುತ್ ಕಂಬದ ಮೇಲೆ ನೇತಾಡುತ್ತಿರುವುದನ್ನು ಕಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮಟ್ಟಿದೆ, ಪ್ರಾಣ ಕಳೆದುಕೊಳ್ಳುತ್ತಿದ್ದ ಪಕ್ಷಿಯನ್ನು ಉಳಿಸಲು ಹೋಗಿ ತಾನೇ ಪ್ರಾಣ ಕಳೆದುಕೊಂಡ ಮಾನವೀಯತೆ ಮೆರೆದು ಸಾವನ್ನಪ್ಪಿರುವ 6ನೇ ತರಗತಿ ಓದುತ್ತಿದ್ದ ರಾಮಚಂದ್ರನ ಸಾವಿಗೆ ಇಡೀ ಗ್ರಾಮವೇ ಕಂಬನಿ ಮಿಡಿದಿದೆ. ಘಟನಾ ಸ್ಥಳಕ್ಕೆ ರಾಂಪುರ ಪಿಎಸ್ಐ ಮಹೇಶ್ ಹೊಸಪೇಟೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್