Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಹೃದಯ ವಿದ್ರಾವಕ ಘಟನೆ : ಪಾರಿವಾಳದ ಪ್ರಾಣ ಉಳಿಸಲು ಹೋಗಿ ತನ್ನ ಪ್ರಾಣ ಕಳೆದುಕೊಂಡ ಬಾಲಕ..!

---Advertisement---

ಸುದ್ದಿಒನ್, ಮೊಳಕಾಲ್ಮುರು, ಜುಲೈ. 25 : ವಿದ್ಯುತ್ ಕಂಬಕ್ಕೆ ಸಿಲುಕಿದ್ದ ಪಾರಿವಾಳದ ಪ್ರಾಣ ಉಳಿಸಲು ಹೋಗಿ ಬಾಲಕನೊಬ್ಬ ಪ್ರಾಣ ಕಳೆದುಕೊಂಡಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ. ಮೊಳಕಾಲ್ಮುರು ತಾಲೂಕಿನ ಸಂತೇಗುಡ್ಡ ಗ್ರಾಪಂ ವ್ಯಾಪ್ತಿಯ ಹನುಮಾಪುರ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ.

ಪಾರಿವಾಳವೊಂದು ಆಕಸ್ಮಿಕವಾಗಿ ವಿದ್ಯುತ್ ಕಂಬದ ಮೇಲಿನ ತಂತಿಗೆ ಸಿಲುಕಿತ್ತು. ಮಳೆಗಾಲ ಬೇರೆ ಆಗಿರುವ ಕಾರಣ ವಿದ್ಯುತ್ ಶಾಕ್ ಪಸರಿಸುತ್ತಿದೆ. ಹೀಗಾಗಿ ತಂತಿ ಮೇಲೆ ಕೂತ ಪಾರಿವಾಳಕ್ಕೂ ಕರೆಂಟ್ ಶಾಕ್ ತಗುಲಿ ಜೀವನ್ಮರಣ ಹೋರಾಟ ನಡೆಸುತ್ತಿತ್ತು. ಇದನ್ನು ಕಂಡ ಬಾಲಕ, ಪಾರಿವಾಳವನ್ನು ರಕ್ಷಿಸಲು ಹೋಗಿದ್ದಾನೆ. ಆದರೆ ಈ ವೇಳೆ ಬಾಲಕನಿಗೆ ಕರೆಂಟ್ ಶಾಕ್ ಹೊಡೆದಿದೆ.

12 ವರ್ಷದ ರಾಮಚಂದ್ರ ಸಾವನ್ನಪ್ಪಿದ ಬಾಲಕ. ವಿದ್ಯುತ್ ಕಂಬದ ಮೇಲೇರಿ ಪಾರಿವಾಳವನ್ನು ರಕ್ಷಿಸಲು ಹೋಗಿ ತಾನೇ ಬಲಿಯಾಗಿದ್ದಾನೆ. ತಂತಿಯಲ್ಲಿ ಸಿಲುಕಿದ ಪಾರಿವಾಳವನ್ನು ರಕ್ಷಿಸುವಾಗ ಬಾಲಕನಿಗೆ ವಿದ್ಯುತ್ ಸ್ಪರ್ಶಸಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಕಣ್ಣೆದುರಿಗೆ ಮಗನ ಶವ ವಿದ್ಯುತ್ ಕಂಬದ ಮೇಲೆ ನೇತಾಡುತ್ತಿರುವುದನ್ನು ಕಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮಟ್ಟಿದೆ, ಪ್ರಾಣ ಕಳೆದುಕೊಳ್ಳುತ್ತಿದ್ದ ಪಕ್ಷಿಯನ್ನು ಉಳಿಸಲು ಹೋಗಿ ತಾನೇ ಪ್ರಾಣ ಕಳೆದುಕೊಂಡ  ಮಾನವೀಯತೆ ಮೆರೆದು ಸಾವನ್ನಪ್ಪಿರುವ 6ನೇ ತರಗತಿ ಓದುತ್ತಿದ್ದ ರಾಮಚಂದ್ರನ ಸಾವಿಗೆ ಇಡೀ ಗ್ರಾಮವೇ ಕಂಬನಿ ಮಿಡಿದಿದೆ. ಘಟನಾ ಸ್ಥಳಕ್ಕೆ ರಾಂಪುರ ಪಿಎಸ್ಐ ಮಹೇಶ್ ಹೊಸಪೇಟೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment