Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ | ಹೃದಯ ವಿದ್ರಾವಕ ಘಟನೆ : ಇಬ್ಬರು ಮಕ್ಕಳ ಜೊತೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ..!

---Advertisement---

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಮಕ್ಕಳನ್ನು ಒಂಬತ್ತು ತಿಂಗಳು ಹೆತ್ತು, ಹೊತ್ತು ಸಾಕಿ ಸಲುಹಿದ ತಾಯಿ, ತನ್ನದೇ ಕರುಳ ಬಳ್ಳಿಯ ಮಕ್ಕಳನ್ನು ಕೊಂದು ತಾನೂ ಸಾಯುತ್ತಾಳೆ ಎಂದರೆ ಆಕೆಯ ಮನಸ್ಸು ಹೇಗಾಗಿರಬಹುದು.

ಇಬ್ಬರು ಪುಟಾಣಿ ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿ ಇಂದು ಬೆಳಿಗ್ಗೆ (ಮಂಗಳವಾರ) 9 ಗಂಟೆ ಸುಮಾರಿಗೆ ನಡೆದಿದೆ.

24 ವರ್ಷದ ಮಾರಕ್ಕ ತನ್ನಿಬ್ಬರು ಪುಟಾಣಿ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 4 ವರ್ಷದ ನಯನ್ ಹಾಗೂ 2 ವರ್ಷದ ಹರ್ಷವರ್ಧನ್ ತಮ್ಮ ತಾಯಿಯೊಂದಿಗೆ ತಮ್ಮ ಜೀವನವನ್ನು ಮುಗಿಸಿಕೊಂಡಿದ್ದಾರೆ.

ಈ ತಾಯಿ, ತನ್ನ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದು ಯಾಕೆ ಎಂಬುದಕ್ಕೆ ನಿಖರವಾದ ಕಾರಣ ಇನ್ನು ತಿಳಿದು ಬಂದಿಲ್ಲ. ಊರ ಹೊರಗಿರುವ ಅವರ ಮನೆಯ ಸಮೀಪದ ಬಣಿವೆ ಹಿತ್ತಲಿನಲ್ಲಿ ಬೇಲಿಗೆ ಬೆಂಕಿ ಹಚ್ಚಿ, ಆ ಬೆಂಕಿಯಲ್ಲಿ ತನ್ನ ಇಬ್ಬರು ಮಕ್ಕಳನ್ನು ಮೊದಲು ಹಾಕಿ, ಬಳಿಕ ತಾಯಿಯೂ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ತಳಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಅಡಿಷನಲ್ ಎಸ್.ಪಿ. ಡಿ.ವೈ.ಎಸ್.ಪಿ ಸೇರಿದಂತೆ ಪೋಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಭೇಟಿ, ಪರಿಶೀಲನೆ ನಡೆಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...