ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಮಕ್ಕಳನ್ನು ಒಂಬತ್ತು ತಿಂಗಳು ಹೆತ್ತು, ಹೊತ್ತು ಸಾಕಿ ಸಲುಹಿದ ತಾಯಿ, ತನ್ನದೇ ಕರುಳ ಬಳ್ಳಿಯ ಮಕ್ಕಳನ್ನು ಕೊಂದು ತಾನೂ ಸಾಯುತ್ತಾಳೆ ಎಂದರೆ ಆಕೆಯ ಮನಸ್ಸು ಹೇಗಾಗಿರಬಹುದು.
ಇಬ್ಬರು ಪುಟಾಣಿ ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮಲ್ಲಸಮುದ್ರ ಗ್ರಾಮದಲ್ಲಿ ಇಂದು ಬೆಳಿಗ್ಗೆ (ಮಂಗಳವಾರ) 9 ಗಂಟೆ ಸುಮಾರಿಗೆ ನಡೆದಿದೆ.
24 ವರ್ಷದ ಮಾರಕ್ಕ ತನ್ನಿಬ್ಬರು ಪುಟಾಣಿ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 4 ವರ್ಷದ ನಯನ್ ಹಾಗೂ 2 ವರ್ಷದ ಹರ್ಷವರ್ಧನ್ ತಮ್ಮ ತಾಯಿಯೊಂದಿಗೆ ತಮ್ಮ ಜೀವನವನ್ನು ಮುಗಿಸಿಕೊಂಡಿದ್ದಾರೆ.
ಈ ತಾಯಿ, ತನ್ನ ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿದ್ದು ಯಾಕೆ ಎಂಬುದಕ್ಕೆ ನಿಖರವಾದ ಕಾರಣ ಇನ್ನು ತಿಳಿದು ಬಂದಿಲ್ಲ. ಊರ ಹೊರಗಿರುವ ಅವರ ಮನೆಯ ಸಮೀಪದ ಬಣಿವೆ ಹಿತ್ತಲಿನಲ್ಲಿ ಬೇಲಿಗೆ ಬೆಂಕಿ ಹಚ್ಚಿ, ಆ ಬೆಂಕಿಯಲ್ಲಿ ತನ್ನ ಇಬ್ಬರು ಮಕ್ಕಳನ್ನು ಮೊದಲು ಹಾಕಿ, ಬಳಿಕ ತಾಯಿಯೂ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ತಳಕು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಅಡಿಷನಲ್ ಎಸ್.ಪಿ. ಡಿ.ವೈ.ಎಸ್.ಪಿ ಸೇರಿದಂತೆ ಪೋಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















