ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 01 : ನಗರದಲ್ಲಿ ಅಕ್ಟೋಬರ್ 03ರಂದು ಹಿಂದೂ ಮಹಾಗಣಪತಿ ವಿಸರ್ಜನಾ ಮಹೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್ಆರ್ಟಿಸಿ ಬಸ್ಗಳ ಕಾರ್ಯಾಚರಣೆಯ ಸ್ಥಳದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ.
ಜಿಲ್ಲಾಡಳಿತದ ಆದೇಶದಂತೆ, ಪ್ರಸ್ತುತ ಕೇಂದ್ರ ಬಸ್ ನಿಲ್ದಾಣದಿಂದ ಸಂಚರಿಸುತ್ತಿರುವ ಸಾರಿಗೆ ಬಸ್ಗಳನ್ನು ಅಕ್ಟೋಬರ್ 03ರಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ತಾತ್ಕಾಲಿಕವಾಗಿ ಚಿತ್ರದುರ್ಗದ ಎ.ಪಿ.ಎಂ.ಸಿ. ಆವರಣದಿಂದ ಕಾರ್ಯಾಚರಣೆಗೊಳಿಸಲಾಗುವುದು ಎಂದು ಕೆಎಸ್ಆರ್ಟಿಸಿ ಚಿತ್ರದುರ್ಗ ವಿಭಾಗೀಯ ನಿಯಂತ್ರಣಾಧಿಕಾರಿ ವೆಂಕಟೇಶ್ ತಿಳಿಸಿದ್ದಾರೆ.










