Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ: ಅ. 3ಕ್ಕೆ ಹಿಂದೂ ಮಹಾಗಣಪತಿ ಶೋಭಾಯಾತ್ರೆ; ಅರುಣ್ ಶ್ಯಾಮ್ ಉದ್ಘಾಟನೆ, ಗೋಪಾಲ್ ಮುಖ್ಯ ಭಾಷಣ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಅ. 01 : ಹಿಂದೂ ಮಹಾಗಣಪತಿ ಮಹೋತ್ಸವವು ಯಾವುದೇ ಸ್ಪರ್ಧೆಯಲ್ಲ, ಬದಲಿಗೆ ಇಡೀ ಸಮಾಜ ಹಾಗೂ ರಾಜ್ಯದ ಜನತೆಯ ಸಾಮೂಹಿಕ ಉತ್ಸವವಾಗಿದೆ. ಶೋಭಾಯಾತ್ರೆಯು ಯಾವುದೇ ವಿಘ್ನಗಳಿಲ್ಲದೆ ಶಾಂತಿಯುತವಾಗಿ ಮತ್ತು ವಿಜೃಂಭಣೆಯಿಂದ ನೆರವೇರಲು ಸಾರ್ವಜನಿಕರು ಹಾಗೂ ಮಾಧ್ಯಮಗಳ ಸಂಪೂರ್ಣ ಸಹಕಾರ ಅಗತ್ಯ ಎಂದು ಬಜರಂಗದಳದ ಕರ್ನಾಟಕ ದಕ್ಷಿಣದ ಪ್ರಾಂತ ಸಂಯೋಜಕ್ ಪ್ರಭಂಜನ್ ಸೂರ್ಯ ಮನವಿ ಮಾಡಿದರು.

ಚಿತ್ರದುರ್ಗ ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳದ ವತಿಯಿಂದ ಪ್ರತಿವರ್ಷ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುವ `ಹಿಂದೂ ಮಹಾಗಣಪತಿ ಮಹೋತ್ಸವ’ದ ಅಂಗವಾಗಿ ಹಿಂದೂ ಮಹಾ ಗಣಪತಿಯ ಸಭಾಮಂಟಪದಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಶೋಭಾಯಾತ್ರೆಗೆ ಪೂರ್ವಾಭಾವಿಯಾಗಿ ನಗರದಲ್ಲಿ ಬೃಹತ್ ಬೈಕ್ ರ್ಯಾಲಿಯನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಅಲ್ಲದೆ, ದುರ್ಗಾ ಹೋಮ, ನವಗ್ರಹ ಹೋಮ, ಗಣಪತಿ ಹೋಮ ಹಾಗೂ ಮೃತ್ಯುಂಜಯ ಹೋಮಗಳು ವಿಸ್ತೃತವಾಗಿ ನೆರವೇರಿವೆ ಶೋಭಾಯಾತ್ರೆಯ ನಿಮಿತ್ತ ಇಡೀ ಚಿತ್ರದುರ್ಗ ನಗರದ ಪ್ರಮುಖ ವೃತ್ತಗಳಾದ ಗಾಂಧಿ ವೃತ್ತ, ಅಂಬೇಡ್ಕರ್ ವೃತ್ತ, ಕಣಕ ವೃತ್ತ ಹಾಗೂ ಒನಕೆ ಓಬವ್ವ ವೃತ್ತಗಳಲ್ಲಿ ಕೇಸರಿ ಅಲಂಕಾರ ಮತ್ತು ದೀಪಾಲಂಕಾರ ಸಿದ್ಧತೆಗಳು ಅಂತಿಮ ಹಂತದಲ್ಲಿವೆ ಎಂದರು.

ಶೋಭಾಯಾತ್ರೆಯು ಬೆಳಿಗ್ಗೆ 10 ಗಂಟೆಗೆ ಗಣಪತಿ ಪೆಂಡಾಲ್ ಎದುರಿನ ವೇದಿಕೆಯಲ್ಲಿ ಪ್ರಾರಂಭವಾಗಲಿದೆ. ಹೈಕೋರ್ಟ್ ವಕೀಲರಾದ ಅರುಣ್ ಶ್ಯಾಮ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ವಿಶ್ವ ಹಿಂದೂ ಪರಿಷತ್‍ನ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಗೋಪಾಲ್ ಅವರು ಮುಖ್ಯ ಭಾಷಣ ಮಾಡಲಿದ್ದಾರೆ. ಚಿತ್ರದುರ್ಗದ ವಿವಿಧ ಮಠಾಧೀಶರು ಮತ್ತು ಸ್ವಾಮೀಜಿಗಳು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಮೆರವಣಿಗೆಯಲ್ಲಿ ತಮಟೆ, ನಾಸಿಕ್ ಢೋಲ್ ಸೇರಿದಂತೆ ಸುಮಾರು 6 ರಿಂದ 8 ಕಲಾತಂಡಗಳು ಪಾಲ್ಗೊಳ್ಳಲಿವೆ. ಗಾಂಧಿ ವೃತ್ತದಲ್ಲಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ಸಮ್ಮುಖದಲ್ಲಿ ವಿಶೇಷ ಆರತಿ ಹಾಗೂ ಕನಕ ವೃತ್ತದಲ್ಲಿ ಬೃಹತ್ ದೀಪಾರಾಧನೆ ಮತ್ತು ದೀಪಾಲಂಕಾರ ನೆರವೇರಲಿದೆ.

ಅ. 3 ರಂದು ಶೋಭಾಯಾತ್ರೆ ನಡೆಯಲಿದ್ದು ಇದರಲ್ಲಿ ರಾಜ್ಯದ ವಿವಿಧ ಕಡೆಗಳಿಂದ ಲಕ್ಷಾಂತರ ಭಕ್ತಾಧಿಗಳು ಭಾಗವಹಿಸಲಿದ್ದು ಜಾನಪದ ಕಲಾ ತಂಡಗಳು ಸೇರಿದಂತೆ ನಾಸ್ತಿಕ್‍ನ ಡೋಲು, ವಿವಿಧ ರೀತಿಯ ಸ್ಥಳಿಯ ಕಲಾವಿದರು ಭಾಗವಹಿಸಲಿದ್ದಾರೆ ಸಮಿತಿಯು ಎಂದಿಗೂ ಡಿಜೆ ಬಳಸುವುದಿಲ್ಲವೆಂದು ಸ್ಪಷ್ಟಪಡಿಸಿದ ಅವರು, ಸಾಂಪ್ರದಾಯಿಕ ಹಾಗೂ ನಿಯಮಾವಳಿಗಳಿಗೆ ಅನುಗುಣವಾಗಿ ಸ್ಪೀಕರ್‍ಗಳನ್ನು ಬಳಸಲಾಗುವುದು ಶುಕ್ರವಾರ ರಜೆ ಇರುವುದರಿಂದ ಈ ಬಾರಿ ರಾಜ್ಯದ ಮೂಲೆ ಮೂಲೆಗಳಿಂದ ಸುಮಾರು 6 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಹಳ್ಳಿಗಳಿಂದ ಟ್ರ್ಯಾಕ್ಟರ್‍ಗಳು ಹಾಗೂ ವಿವಿಧ ವಾಹನಗಳಲ್ಲಿ ದರ್ಶನಕ್ಕೆ ಆಗಮಿಸುವ ನಿರೀಕ್ಷೆಯಿದೆ. ಆಗಮಿಸುವ ಎಲ್ಲಾ ಭಕ್ತರಿಗೂ ಸುಸಜ್ಜಿತವಾಗಿ ಅನ್ನಪ್ರಸಾದ ವಿತರಣೆ ಮಾಡಲು ಆಯೋಜಕರ ಜೊತೆ ಸಭೆ ನಡೆಸಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಹಿಂದೂ ಮಹಾ ಗಣಪತಿ ಸಮಿತಿಯ ಅಧ್ಯಕ್ಷರಾದ ಜಿ.ಆರ್.ಸುದೀರ್ ಮಾತನಾಡಿ ಗಣೇಶೋತ್ಸವ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದು, ಪ್ರತಿದಿನ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿ ಗಣೇಶನ ದರ್ಶನ ಪಡೆಯುತ್ತಿದ್ದಾರೆ ಶೋಭಾಯಾತ್ರೆಯ ಅಂಗವಾಗಿ ನಗರದಲ್ಲಿ ಭಕ್ತರು ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಪ್ರಸಾದ ವಿತರಣೆಗೆ ತಯಾರಿ ಮಾಡಿಕೊಳ್ಳಲಾಗುತ್ತಿದ್ದು, ನಗರದ ವಿವಿಧ ಪ್ರಮುಖ ಸ್ಥಳಗಳಾದ ಮದಕರಿ ವೃತ್ತ, ಕಾರು ಸ್ಟ್ಯಾಂಡ್, ಮಹಾವೀರ ಸರ್ಕಲ್ (ಜೈನ್ ಮಂದಿರದ ಬಳಿ), ಬರಿಗೇರಮ್ಮನ ದೇವಸ್ಥಾನ ಹಾಗೂ ಕಲ್ಯಾಣ ಮಂಟಪಗಳಲ್ಲಿ ವಿಶೇಷ ಪ್ರಸಾದ ವ್ಯವಸ್ಥೆ ಮಾಡಲಾಗಿದೆ. ಇದಕ್ಕೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಿಂದ ಅಗತ್ಯ ಸಹಕಾರ ಮತ್ತು ನಿಯಮಾವಳಿಗಳ ಬೆಂಬಲ ದೊರೆತಿದೆ ಎಂದರು.

ಗೋಷ್ಟಿಯಲ್ಲಿ ವಿಶ್ವ ಹಿಂದೂ ಪರಿಷದ್ ಜಿಲ್ಲಾ ಕಾರ್ಯದರ್ಶಿ ಚನ್ನಕೇಶವ, ಉಪಾಧ್ಯಕ್ಷರಾದ ಅಶೋಕ್ ಕುಮಾರ್, ಸಲಹಾ ಸಮಿತಿ ಸದಸ್ಯರಾದ ಶರಣ್ ಕುಮಾರ್, ಜಿ.ಎಂ.ಸುರೇಶ್, ಸಂದೀಪ್ ಸೇರಿದಂತೆ ಇತರರು ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now