Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ನಾಳೆ ಮದುವೆ ನಿಶ್ಚಿತಾರ್ಥವಾಗಬೇಕಿದ್ದ  ಹೊಳಲ್ಕೆರೆ ಕೃಷಿ ಅಧಿಕಾರಿ ಅಪಘಾತದಲ್ಲಿ ಮೃತ್ಯು

---Advertisement---

 

 

ಸುದ್ದಿಒನ್, ಚಿತ್ರದುರ್ಗ, ಜನವರಿ.20 : ನಗರದ ಹೊಳಲ್ಕೆರೆ ರಸ್ತೆಯ ತಿರುಮಲ ಡಾಬಾ ಬಳಿಯ ಏಕನಾಥೇಶ್ವರಿ ಲೇಔಟ್ ಸಮೀಪ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹೊಳಲ್ಕೆರೆ ಕೃಷಿ ಅಧಿಕಾರಿ (ತಾಂತ್ರಿಕ)  ಸಾವನ್ನಪ್ಪಿದ್ದಾರೆ.

ಹೊಳಲ್ಕೆರೆ ಕೃಷಿ ಇಲಾಖೆಯಲ್ಲಿ (ತಾಂತ್ರಿಕ) ಕಾರ್ಯ ನಿರ್ವಹಿಸುತ್ತಿದ್ದ ವಿಶಾಲ್ ಕುಮಾರ್ (28 ವರ್ಷ) ಅವರು ಎಂದಿನಂತೆ ಚಿತ್ರದುರ್ಗದಿಂದ ಹೊಳಲ್ಕೆರೆ ಮಾರ್ಗವಾಗಿ ಕರ್ತವ್ಯ ನಿಮಿತ್ತ ಹೋಗುತ್ತಿದ್ದಾಗ ಶನಿವಾರ ಬೆಳಿಗ್ಗೆ ಹೊಳಲ್ಕೆರೆ ರಸ್ತೆಯ ತಿರುಮಲ ಡಾಬಾ ಬಳಿ ಲಾರಿ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ವಿಶಾಲ್ ಕುಮಾರ್ ಸ್ಥಳದಲ್ಲಿಯೇ ಅಸುನೀಗಿದ್ದಾರೆ.

ನಾಳೆ ಇವರ ಮದುವೆಯ ನಿಶ್ಚಿತಾರ್ಥ ಇತ್ತು ಎಂದು ತಿಳಿದು ಬಂದಿದ್ದು. ಮದುವೆ ಮಾಡಿಕೊಂಡು ಸುಖ ಸಂಸಾರ ನಡೆಸುವ ಕನಸು ಕಾಣುತ್ತಿದ್ದ ಕೃಷಿ ಅಧಿಕಾರಿಯೊಬ್ಬರು ಅಪಘಾತದಲ್ಲಿ ಮೃತಪಟ್ಟ ದುರಂತ ಸಂಭವಿಸಿದ್ದು, ಸ್ಥಳಕ್ಕೆ ಕುಟುಂಬದ ಸದಸ್ಯರು ಆಗಮಿಸಿದ್ದು, ಅವರ ಆಕ್ರಂದನ ಮುಗಿಲು ಮುಟ್ಟಿತ್ತು.

ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment