Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಜು.26 ಮತ್ತು 27 ರಂದು ಶಾಲೆಗಳಿಗೆ ರಜೆ : ಜಿಲ್ಲಾಧಿಕಾರಿ ಆದೇಶ

---Advertisement---

 

ಸುದ್ದಿಒನ್, ಚಿತ್ರದುರ್ಗ, (ಜು.25) :  ಜಿಲ್ಲಾ ವ್ಯಾಪ್ತಿಯಲ್ಲಿ ಬಿಟ್ಟು ಬಿಡದೇ ಅತಿಯಾದ ಮಳೆಯಾಗುತ್ತಿರುವುದರಿಂದ ಅಂಗನವಾಡಿ ಕೇಂದ್ರಗಳು, ಎಲ್ಲಾ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಿಗೆ ದಿನಾಂಕ:26-07-2023 ಮತ್ತು ದಿನಾಂಕ:27-07-2023 ರಂದು ಎರಡು ದಿನಗಳು ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಜೆ.ಆರ್.ಜೆ ದಿವ್ಯಪ್ರಭು ಆದೇಶ ಹೊರಡಿಸಿದ್ದಾರೆ.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಬಿಟ್ಟು ಬಿಡದೇ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ವಿಧ್ಯಾರ್ಥಿಗಳು ಶಾಲೆಗೆ ಬರಲು ತೊಂದರೆಯಾಗುತ್ತಿದ್ದು, ಚಿತ್ರದುರ್ಗ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಾಗೂ ಅಂಗನವಾಡಿ ಕೇಂದ್ರಗಳ ಮಕ್ಕಳ ಹಿತದೃಷ್ಟಿಯಿಂದ ರಜೆ ಘೋಷಿಸಲಾಗಿದ್ದು,
ಪ್ರಸ್ತುತ ನೀಡಿರುವ ರಜೆ ಅವಧಿಯಲ್ಲಿ ನಿರ್ವಹಿಸಬೇಕಾದ ಪಠ್ಯಗಳನ್ನು ಇತರೆ ಸಾರ್ವತ್ರಿಕ ರಜಾ ದಿನಗಳಂದು ಸರಿದೂಗಿಸಿಕೊಂಡು ನಿರ್ವಹಿಸಬೇಕೆಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಉಳಿದಂತೆ ಪದವಿ ಸ್ನಾತಕೋತ್ತರ ಪದವಿ, ಡಿಪ್ಲೊಮಾ ಎಂಜಿನಿಯರಿಂಗ್ ಮತ್ತು ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಲಾಗಿರುವುದಿಲ್ಲ ಹಾಗೂ ಎಂದಿನಂತೆ ತರಗತಿಗಳು ನಡೆಯುತ್ತವೆ ಎಂದು ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment