Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಹೆಚ್ಚು ಕರ ವಸೂಲಾತಿ ಮಾಡಿ ಪಿಡಿಒಗಳಿಗೆ ಸನ್ಮಾನ

---Advertisement---

ಚಿತ್ರದುರ್ಗ. ಜ.01: ಗ್ರಾಮದ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿಯಾಗಲು ಸಾಧ್ಯ ಎಂದು ಚಿತ್ರದುರ್ಗ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವೈ.ರವಿಕುಮಾರ್ ಹೇಳಿದರು.

 

ನಗರದ ತಾಲ್ಲೂಕು ಪಂಚಾಯಿತಿ  ಸಭಾಂಗಣದಲ್ಲಿ ಬುಧವಾರ ಚಿತ್ರದುರ್ಗ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಹೆಚ್ಚು ಕರ ವಸೂಲಾತಿ ಮಾಡಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿಗೆ ಸನ್ಮಾನಿಸಿ ಅವರು ಮಾತನಾಡಿದರು.

ಗ್ರಾಮದ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿಯಾಗಲು ಸಾಧ್ಯ. ಹಾಗಾಗಿ ಸರ್ಕಾರದ ಕಾರ್ಯಕ್ರಮಗಳು ಮತ್ತು ಯೋಜನೆಗಳ ಉತ್ತಮ ಅನುಷ್ಠಾನಕ್ಕೆ ಈ ಹೊಸ ವರ್ಷದ ದಿನ ಕಟಿಬದ್ಧರಾಗಬೇಕು ಎಂದು ತಿಳಿಸಿದ ಅವರು, ಉತ್ತಮ ಕರ ವಸೂಲಿ ಮಾಡಿರುವ ಗ್ರಾಮ ಪಂಚಾಯಿತಿಳಂತೆ ಇತರೆ ಗ್ರಾಮ ಪಂಚಾಯಿತಿಗಳೂ ಉತ್ತಮ ಸಾಧನೆ ಮಾಡಬೇಕು ಎಂದು ಹೇಳಿದರು.

ಗ್ರಾಮ ಪಂಚಾಯಿತಿ ತೆರಿಗೆಯಿಂದ ಸಂಗ್ರಹಿಸುವ ಆದಾಯವನ್ನು ತನ್ನ ಆಡಳಿತ ವ್ಯವಸ್ಥೆಯಲ್ಲಿ ಕೆಲಸ ನಿರ್ವಹಿಸುವ ನೌಕರರ ಸಂಬಳ, ಗ್ರಾಮದ ಅಭಿವೃದ್ಧಿಗೆ ಮತ್ತು ಅಲ್ಲಿನ ನಿವಾಸಿಗಳ ಮೂಲಭೂತ ಸೇವೆ ಒದಗಿಸಲು ಬಳಸಲಾಗುತ್ತದೆ. ಈ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಅವರ ಸೂಚನೆಯಂತೆ ಚಿತ್ರದುರ್ಗ ತಾಲ್ಲೂಕಿನ 38 ಗ್ರಾಮ ಪಂಚಾಯಿತಿಗಳಲ್ಲಿ ಎಲ್ಲಾ ಸಿಬ್ಬಂದಿಗಳೂ ಕಳೆದ ಒಂದು ತಿಂಗಳಿಂದ ಅಭಿಯಾನದ ರೂಪದಲ್ಲಿ ಕರ ವಸೂಲಾತಿ ಆಂದೋಲನ ಹಮ್ಮಿಕೊಂಡಿದ್ದರಿಂದ ಪ್ರಸಕ್ತ ಸಾಲಿನಲ್ಲಿ ಚಿತ್ರದುರ್ಗ ತಾಲ್ಲೂಕಿನ ರೂ. 12,44,11,412/-ಗಳ ಒಟ್ಟು ಬೇಡಿಕೆಯಲ್ಲಿ ರೂ.6,68,06,208/- ಕರ ವಸೂಲಿಯಾಗಿ ಡಿಸೆಂಬರ್ ಅಂತ್ಯಕ್ಕೆ ಶೇ.53.70 ಕರ ವಸೂಲಾತಿಯಾಗಿದೆ ಎಂದು ಹೇಳಿದರು.

ಜಿ.ಆರ್.ಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆನಂದ್ ಮಾತನಾಡಿ, ಗ್ರಾಮ ಪಂಚಾಯಿತಿ ಸಿಬ್ಬಂದಿಗಳ ಕಾರ್ಯವೈಖರಿ ಹಾಗೂ ದಿನಂಪ್ರತಿ ಜನರ ಮನವೊಲಿಸುವಿಕೆಯಿಂದ, ಅಲ್ಲದೆ ಗ್ರಾಮ ಪಂಚಾಯತಿಯ ಆಡಳಿತ ಸದಸ್ಯರ ಸಹಕಾರದಿಂದಾಗಿ ಉತ್ತಮ ಸಾಧನೆ ಮಾಡಲು ಸಾಧ್ಯವಾಯಿತು ಎಂದರು.

ಇದೇ ಸಂದರ್ಭದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ಅತಿ ಹೆಚ್ಚು ಕರ ವಸೂಲಿ ಮಾಡಿರುವ ಆಲಗಟ್ಟ (ಶೇ.82.98), ಇಂಗಳದಾಳ್(ಶೇ.87.29), ಜಿ.ಆರ್.ಹಳ್ಳಿ(ಶೇ.84.47) ಮತ್ತು ಮಾಡನಾಯಕನಹಳ್ಳಿ (ಶೇ.86.28) ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಹಾಗೂ ಪ್ರಮುಖವಾಗಿ ಬಿಲ್ ಕಲೆಕ್ಟರ್‍ಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಚಿತ್ರದುರ್ಗ ತಾಲ್ಲೂಕು ಪಂಚಾಯಿತಿ ಸಹಾಯಕ ಲೆಕ್ಕಾಧಿಕಾರಿ ಕೆಂಚಪ್ಪ, ತಾಲ್ಲೂಕು ಯೋಜನಾಧಿಕಾರಿ ರಾಘವೇಂದ್ರ, ನರೇಗಾ ಮತ್ತು ಪಂಚಾಯತ್ ರಾಜ್ ಸಹಾಯಕ ನಿರ್ದೇಶಕರಾದ ಹೆಚ್.ಯರ್ರಿಸ್ವಾಮಿ ಮತ್ತು ರೂಪಾ ಕುಮಾರಿ, ವ್ಯವಸ್ಥಾಪಕ ಇರ್ಫಾನ್, ಪಿಡಿಒ ಮಹಾಲಕ್ಷ್ಮಿ, ನಾಸೀರ್, ಎಂಐಎಸ್ ಸಂಯೋಜಕ ಉಮೇಶ್, ಐಇಸಿ ಸಂಯೋಜಕ ಸತ್ಯನಾರಾಯಣ, ಚಿತ್ರದುರ್ಗ ತಾಲ್ಲೂಕಿನ ಪಿಡಿಒ, ಕಾರ್ಯದರ್ಶಿ, ದ್ವಿತೀಯ ದರ್ಜೆ ಸಹಾಯಕರು, ಬಿಲ್ ಕಲೆಕ್ಟರ್‍ಗಳು ಹಾಗೂ ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment