ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 16: ರಾಷ್ಟ್ರೀಯ ಹೆದ್ದಾರಿ 150ರಲ್ಲಿ ನಿಯಂತ್ರಣ ತಪ್ಪಿದ ಕಾರೊಂದು ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಏಳು ಮಂದಿ ಗಂಭೀರವಾಗಿ ಗಾಯಗೊಂಡಿರುವ ಭೀಕರ ರಸ್ತೆ ಅಪಘಾತ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಕೋನಾಪುರ ಸಮೀಪ ಶನಿವಾರ ರಾತ್ರಿ ಸಂಭವಿಸಿದೆ.
ಅಪಘಾತದಲ್ಲಿ ಮಾಗಡಿ ಮೂಲದ ಶಿವಕುಮಾರ್ (37) ಹಾಗೂ ಮಲ್ಲಯ್ಯ (40) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಕಾರಿನಲ್ಲಿದ್ದ ಉಳಿದ ಏಳು ಜನರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ತಕ್ಷಣವೇ ಸಮೀಪದ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಾರು ವೇಗವಾಗಿ ಚಲಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಸೇತುವೆಯ ತಡೆಗೋಡೆಗೆ ರಭಸವಾಗಿ ಡಿಕ್ಕಿ ಹೊಡೆದಿದ್ದೇ ದುರಂತಕ್ಕೆ ಕಾರಣ ಎನ್ನಲಾಗಿದೆ. ಮೊಳಕಾಲ್ಮೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.










