Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ: ಬಡವರಿಗೆ ವಸತಿ ಸೌಲಭ್ಯ; 8ನೇ ದಿನಕ್ಕೆ ಕಾಲಿಟ್ಟ ಅನಿರ್ದಿಷ್ಟಾವಧಿ ಮುಷ್ಕರ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 15 : ನಿವೇಶನ ಮತ್ತು ವಸತಿರಹಿತರ ಹೋರಾಟ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ವೃತ್ತದಲ್ಲಿ ನಡೆಯುತ್ತಿರುವ ಸೂರಿಗಾಗಿ ಸಮರ ಅನಿರ್ಧಿಷ್ಟಾವಧಿ ಮುಷ್ಕರ ಗುರುವಾರ ಎಂಟನೆ ದಿನಕ್ಕೆ ಕಾಲಿಟ್ಟಿದೆ.

ಸ್ವಂತ ನಿವೇಶನ, ಮನೆಯಿಲ್ಲದ ಜಿಲ್ಲೆಯ ಬಡವರಿಗೆ ವಸತಿ ಸೌಲಭ್ಯ ಕಲ್ಪಿಸುವಂತೆ ನಗರಸಭೆಗೆ ಅನೇಕ ಬಾರಿ ಮನವಿ ಸಲ್ಲಿಸಿದ್ದು, ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ ಅವರನ್ನು ಭೇಟಿಯಾಗಿ ಬಡವರಿಗೆ ಭೂಮಿ ಗುರುತಿಸಿ ನಿವೇಶನಗಳನ್ನು ವಿಂಗಡಿಸಿ ಮನೆಗಳನ್ನು ಕಟ್ಟಿಕೊಳ್ಳಲು ಹಣದ ನೆರವು ನೀಡುವಂತೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಈಗಲಾದರೂ ಕಂದಾಯ ಭೂಮಿಯನ್ನು ಗುರುತಿಸಿ ಬಡವರಿಗೆ ಮನೆಗಳನ್ನು ಕಟ್ಟಿಸಿಕೊಡಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲವೆಂದು ನಿವೇಶನ ಮತ್ತು ವಸತಿರಹಿತರ ಹೋರಾಟ ಸಮಿತಿ ಕಾರ್ಯದರ್ಶಿ ಕಾಂ.ಜಾಫರ್‍ಷರೀಫ್ ಎಚ್ಚರಿಸಿದರು.

ನಿವೇಶನ ಮತ್ತು ವಸತಿರಹಿತರ ಹೋರಾಟ ಸಮಿತಿ ಸಂಘಟನಾ ಕಾರ್ಯದರ್ಶಿ ಕಾಂ.ಈ.ಸತ್ಯಕೀರ್ತಿ, ರಾಜ್ಯ ಸಮಿತಿ ಸದಸ್ಯರುಗಳಾದ ಲೇಪಾಕ್ಷಿ, ರೇಣುಕ ಹಾಗೂ ಶಿಲ್ಪ
ಭೂಮಿಕ, ಚಂದ್ರಕಲಾ, ಪ್ರಸನ್ನಕುಮಾರ್, ಬಾಬು, ವಿಠಲ, ತಿಪ್ಪೇಸ್ವಾಮಿ ಸೇರಿದಂತೆ ನೂರಾರು ಮಹಿಳೆಯರು ಮುಷ್ಕರದಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now