Connect with us

Hi, what are you looking for?

ಪ್ರಮುಖ ಸುದ್ದಿ

ಚಿತ್ರದುರ್ಗ | ಜಿಲ್ಲೆಯಲ್ಲಿ ಕೋವಿಡ್‍ನಿಂದಾಗಿ ಮೊದಲ ಮತ್ತು ಎರಡನೇ ಅಲೆಯಲ್ಲಿ ಒಟ್ಟು ಮೃತಪಟ್ಟವರೆಷ್ಟು ?

ಸುದ್ದಿಒನ್, ಚಿತ್ರದುರ್ಗ, (ಮೇ.18) : ಕೋವಿಡ್ ಮೊದಲ, ಎರಡನೇ ಅಲೆಯಲ್ಲಿ ಒಟ್ಟು 296 ಜನ ಮೃತರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು. ಕೋವಿಡ್ ಮೊದಲ ಅಲೆ ಹಾಗೂ ಈಗಿರುವ ಎರಡನೇ ಅಲೆಯಲ್ಲಿ ಕೋವಿಡ್‍ನಿಂದ 113 ಜನರು ಮರಣ ಹೊಂದಿದ್ದಾರೆ. ಆದರೆ ಕೋವಿಡ್ ಪರೀಕ್ಷೆಯಲ್ಲಿ ಕಂಡುಬರದೆ ಸಿಟಿ ಸ್ಕ್ಯಾನ್, ಎಕ್ಸ್‍ರೇಯಲ್ಲಿ ಕೋವಿಡ್ ಲಕ್ಷಣಗಳು ಪತ್ತೆಯಾದ ಐಎಲ್‍ಐ, ಸಾರಿ ಪ್ರಕರಣಗಳಲ್ಲಿ 183 ಜನರು ಸಾವ್ನಪ್ಪಿದ್ದು ಒಟ್ಟು 296 ಜನರು ಮರಣ ಹೊಂದಿರುತ್ತಾರೆ ಎಂದರು.

ಸಾರ್ವಜನಿಕರು ತಮಗೆ ರೋಗ ಲಕ್ಷಣಗಳು ಕಂಡು ಬಂದ ತಕ್ಷಣ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆಯಬೇಕು. ಚಿಕಿತ್ಸೆ ಪಡೆಯದೆ ವಿಳಂಬ ಮಾಡುತ್ತಾರೆ. ವಿಳಂಬ ಮಾಡಿದವರಿಗೆ ರೋಗಾಣುಗಳು ತೀವ್ರಗೊಂಡು ಹಾನಿಯನ್ನು ಉಂಟು ಮಾಡುತ್ತದೆ. ಆದ್ದರಿಂದ ಸಾರ್ವಜನಿಕರು ಮುಂಜಾಗ್ರತೆ ವಹಿಸಿ ಸಕಾಲಕ್ಕೆ ಚಿಕಿತ್ಸೆ ಪಡೆದುಕೊಳ್ಳಬೇಕೆಂದು ತಿಳಿಸಿದರು.

ಹೊಸದುರ್ಗ ತಾಲ್ಲೂಕಿನಲ್ಲಿ ಕೋವಿಡ್ ಪಾಸಿಟಿವ್ ಬಂದವರನ್ನು ಆಸ್ಪತ್ರೆಗೆ ಕರೆ ತಂದು ರೋಗದ ತೀವ್ರತೆಯನ್ನು ಆಧರಿಸಿ ಆಸ್ಪತ್ರೆ, ಕೋವಿಡ್ ಕೇರ್ ಸೆಂಟರ್‍ಗೆ ಕರೆ ತಂದು ಚಿಕಿತ್ಸೆ ನೀಡಲಾಗುತ್ತಿದೆ. ಕೋವಿಡ್ ಕೇರ್ ಸೆಂಟರ್‍ಗಳಲ್ಲಿ ವೈದ್ಯರು, ನರ್ಸ್‍ಗಳು ಇರುವುದರಿಂದ ಅವರ ಆಕ್ಸಿಜನ್ ಲೆವೆಲ್, ಉಸಿರಾಟ, ರಕ್ತದೊತ್ತಡ ಸೇರಿದಂತೆ ತಪಾಸಣೆ ಮಾಡಲಾಗುತ್ತದೆ. ಇದರಿಂದ ರೋಗದ ತೀವ್ರತೆಯನ್ನು ಆಧರಿಸಿ ಚಿಕಿತ್ಸೆ ನೀಡಲು ಸಹಕಾರಿಯಾಗಲಿದ್ದು ಮುಂದೆ ಸಂಭವಿಸಬಹುದಾದ ಅನಾಹುತಗಳು ತಪ್ಪಲಿವೆ. ಇದೇ ಮಾದರಿಯಲ್ಲಿ ಎಲ್ಲಾ ತಾಲ್ಲೂಕುಗಳಲ್ಲಿ ಕೋವಿಡ್ ಕೇರ್ ಸೆಂಟರ್‍ಗಳನ್ನು ಪ್ರಾರಭಿಸಲಾಗಿದ್ದು ಜಿಲ್ಲಾ ಆರೋಗ್ಯಾಧಿಕಾರಿಗಳು ಕ್ರಮ ಕೈಗೊಳ್ಳಬೇಕು, ಇದಕ್ಕೆ ಬೇಕಾಗಿರುವ ವಾಹನಗಳನ್ನು ಒದಗಿಸಲಾಗುತ್ತದೆ ಎಂದರು.

ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣ, ಡಿಎಚ್‍ಒ ಡಾ.ಪಾಲಾಕ್ಷ, ಜಿಲ್ಲಾ ಸರ್ಜನ್ ಡಾ.ಬಸವರಾಜಪ್ಪ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಂಗನಾಥ್, ಡಾ.ತುಳಸಿರಂಗನಾಥ್, ಆರ್.ಸಿ.ಹೆಚ್ ಅಧಿಕಾರಿ ಡಾ.ಕುಮಾರಸ್ವಾಮಿ, ಹೊಸದುರ್ಗ ತಾಲ್ಲೂಕು ಆರೋಗ್ಯಾಧಿಕಾರಿ ಡಾ; ಚಂದ್ರಶೇಖರ್ ಕಂಬಾಳಿಮಠ, ಬಿಸಿಎಂ ಅಧಿಕಾರಿ ಅವೀನ್, ಮಲೇರಿಯಾ ನಿಯಂತ್ರಣಾಧಿಕಾರಿ ಡಾ; ಕಾಶಿ ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

Latest

ದಿನ ಭವಿಷ್ಯ

ಬುಧವಾರ ರಾಶಿ ಭವಿಷ್ಯ-ಆಗಸ್ಟ್-4,2021 ಕಾಮಿಕಾ ಏಕಾದಶಿ ಸೂರ್ಯೋದಯ: 06:04 AM, ಸೂರ್ಯಸ್ತ: 06:44 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ ಆಷಾಢ ಮಾಸ, ದಕ್ಷಿಣಾಯಣ, ಗ್ರೀಷ್ಮ...

ಚಿತ್ರದುರ್ಗ

upper bhadra meeting in DS Hally, chitradurga ಡಿಎಸ್ ಹಳ್ಳಿಯಲ್ಲಿ ಭದ್ರಾ ಮೇಲ್ದಂಡೆ ಸಭೆ; ಗ್ರಾಮಸ್ಥರು ಭಾಗಿ ಸುದ್ದಿಒನ್, ಚಿತ್ರದುರ್ಗ, (ಆ.03) : ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಜ್ಞಾನಪೂರ್ಣ ಶಾಲೆ ಆವರಣದಲ್ಲಿ...

ಚಿತ್ರದುರ್ಗ

ಸುದ್ದಿಒನ್, ಚಿತ್ರದುರ್ಗ, (ಆ.03) : ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಸ್ ಜೆ ಎಮ್ ಸಿ ಬಿ ಎಸ್ ಇ ರೆಸಿಡೆನ್ಷಿಯಲ್ ಶಾಲೆಯು 2020-21 ನೇ ಸಾಲಿನ ಸಿ ಬಿ ಎಸ್ ಇ...

ಪ್ರಮುಖ ಸುದ್ದಿ

ಬೆಂಗಳೂರು: ಸಚಿವ ಸಂಪುಟ ರಚನೆ ಬಗ್ಗೆ ಚರ್ಚೆ ನಡೆಸೋದಕ್ಕಾಗಿಯೇ ಸಿಎಂ ಮೂರು ದಿನದಿಂದ ದೆಹಲಿಯಲ್ಲಿದ್ದಾರೆ. ಈಗಾಗಲೇ ಹೈಕಮಾಂಡ್ ಜೊತೆ ಈ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಅಷ್ಟೇ ಅಲ್ಲ ಸಂಪುಟದಲ್ಲಿ ಯಾರೆಲ್ಲಾ ಇರ್ಬೇಕು...

ಪ್ರಮುಖ ಸುದ್ದಿ

ಮುಂಬೈ: ಶಿಲ್ಲಾ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಎಷ್ಟು ಆ್ಯಕ್ಟೀವ್ ಆಗಿದ್ರೋ ಮಗ ವಿಹಾನ್ ಕುಂದ್ರಾ ಕೂಡ ಅಷ್ಟೇ ಆ್ಯಕ್ಟೀವ್ ಆಗಿದ್ದ. ಸದಾ ಸೋಷಿಯಲ್ ಮೀಡಿಯಾದಲ್ಲಿ ಒಂದಿಲ್ಲೊಂದು ಪೋಸ್ಟ್ ಹಾಕ್ತಾ ಇದ್ದ. ಆದ್ರೆ ರಾಜ್...

ಪ್ರಮುಖ ಸುದ್ದಿ

ರಾಜಸ್ಥಾನ : ಹಿಂದಿನ ಕಾಲದಿಂದಲೂ ಪಾರಿವಾಳ ಸಂದೇಶ ರವಾನಿಸುವ, ಬೇಹುಗಾರಿಕೆಯಲ್ಲೂ ತನ್ನ ಚಾಣಾಕ್ಯತನ ತೋರಿದೆ. ತಂತ್ರಜ್ಞಾನ ಮುಂದುವರೆದ ಕಾಲದಲ್ಲೂ ಪಾಕಿಸ್ತಾನದಿಂದ ಪತ್ರವೊಂದನ್ನ ಹೊತ್ತು ತಂದಿದೆ ಪಾರಿವಾಳ. ಹೌದು, ಈ ಘಟನೆ ನಡೆದಿರೋದು ರಾಜಸ್ಥಾನದ...

You May Also Like

ಚಿತ್ರದುರ್ಗ

ಚಿತ್ರದುರ್ಗ, (ಜು.31): ಕೋಟೆನಾಡಿನಲ್ಲಿ ಮತ್ತೆ ಸರಗಳ್ಳತ ಹಾವಳಿ ಶುರುವಾಗಿದೆ. ಬೆಳಗಿ ಹೊತ್ತು ವಾಯು ವಿಹಾರಕ್ಕೆ ಬರುವ ಮಹಿಳೆಯರನ್ನು ಟಾರ್ಗೆಟ್ ಮಾಡುವ ಕಳ್ಳರು ಬೈಕ್ ನಲ್ಲಿ ಬಂದು ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದಾರೆ. ಶನಿವಾರ ಬೆಳಗ್ಗೆ...

ಪ್ರಮುಖ ಸುದ್ದಿ

ಅಭಿಮಾನಿಗಳು ತಮ್ಮ ಅಭಿಮಾನವನ್ನ ಒಂದೊಂದು ಬಾರಿ ಒಂದೊಂದು ರೀತಿಯಲ್ಲಿ ಅಭಿಮಾನ ತೋರಿಸ್ತಾರೆ. ಅದರಲ್ಲೂ ಅಭಿಮಾನಿಗಳು ತಮ್ಮ ನೆಚ್ಚಿನ ನಟ ನಟಿಯರ ಫೋಟೋಗಳಿಗೆ ಹಾರ ಹಾಕಿ, ಅಭಿಷೇಕ‌ ಮಾಡಿ ಎಂಜಾಯ್ ಮಾಡ್ತಾರೆ. ಇನ್ನು ಒಂದೆಜ್ಜೆ...

ಆರೋಗ್ಯ

ರಾಗಿ ತಿಂದೋನಿಗೆ ರೋಗವಿಲ್ಲ ಅನ್ನೋ ಮಾತು ಕೇಳಿರ್ತೀರಿ. ಆದ್ರೆ ಈ ಮಾತು ಯಾಕೆ ಹೇಳ್ತಾರೆ ಅಂತ ಗೊತ್ತಾಗ್ಬೇಕಂದ್ರೆ ರಾಗಿಯಿಂದ ಆರೋಗ್ಯಕ್ಕೆ ಅದೆಷ್ಟೆಲ್ಲ ಲಾಭಗಳಿವೆ ಎಂದು ತಿಳ್ಕೋಬೇಕು. ರಾಗಿಯಲ್ಲಿ ಸಾಕಷ್ಟು ಕ್ಯಾಲ್ಶಿಯಂ ಇದೆ. ಆಸ್ಟಿಯೋಪೋರೋಸಿಸ್...

ಆರೋಗ್ಯ

ಅರಳಿ ಮರ ಸಾಮಾನ್ಯವಾಗಿ ಎಲ್ಲೆಡೆ ಇರುತ್ತೆ. ಅದಕ್ಕೆ ನಗರ, ಗ್ರಾಮೀಣ ಅಂತೆಲ್ಲಾ ಏನಿಲ್ಲ. ನಗರ ಪ್ರದೇಶದಲ್ಲೂ ದೇವಾಲಯದ ಮುಂದೆ ಅರಳಿಮರವನ್ನ ಕಾಣಬಹುದು. ಈ ಅರಳಿ‌ಮರದ ಎಲೆಗಳಿಂದ ಸಾಕಷ್ಟು ಲಾಭಗಳಿವೆ. ಅದು ಅಷ್ಟಾಗಿ ಯಾರಿಗೂ...

Copyright © 2021 Suddione. Kannada online news portal

error: Content is protected !!