Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಟಿ.ಎಮ್ಮಿಗನೂರು ಗ್ರಾಮದಲ್ಲಿ ಬಾಲ್ಯ ವಿವಾಹ : ಪ್ರಕರಣ ದಾಖಲು

---Advertisement---

ಚಿತ್ರದುರ್ಗ. ಆ.23: ಹೊಳಲ್ಕೆರೆ ತಾಲ್ಲೂಕಿನ ಟಿ.ಎಮ್ಮಿಗನೂರು ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯನ್ನು ಬಾಲ್ಯ ವಿವಾಹವಾಗಲು ಸಿದ್ದವಾಗಿದ್ದ ರಂಗಸ್ವಾಮಿ.ಆರ್.ಟಿ. ಎಂಬ ಯುವಕನ ವಿರುದ್ದ ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಾಗಿದೆ.

ಹೊಳಲ್ಕೆರೆ ತಾಲೂಕಿನ ಟಿ.ಎಮ್ಮಿಗನೂರು
ಸಿಡಿಪಿಓ ಕಚೇರಿಯ ಮಹಿಳಾ ಮೇಲ್ವಿಚಾರಕಿ ಲಕ್ಷ್ಮಮ್ಮ ನೀಡಿದ ದೂರಿನ ಮೇರೆಗೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದರು. ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡುವ ವೇಳೆಗಾಗಲೇ ಮದುವೆ ಮುಗಿದಿತ್ತು. ವಧು-ವರನ ವಯಸ್ಸಿನ ಬಗ್ಗೆ ಪೋಷಕರು ಮಾಹಿತಿಯನ್ನು ಗೌಪ್ಯವಾಗಿಟ್ಟಿದ್ದರು. ಆದರೆ ಶಾಲಾ ದಾಖಲಾತಿ ಪರಿಶೀಲಿಸಿದಾಗ ವಧು ಅಪ್ರಾಪ್ತಳೆಂಬುದು ಪತ್ತೆಯಾಗಿದೆ.

ಬಾಲ್ಯ ವಿವಾಹ ಜರುಗುತ್ತಿರುವ ಕುರಿತ ಮಾಹಿತಿ ಆಧಿರಿಸಿ, ಹೊಳಲ್ಕೆರೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಯುವಕ ವಿರುದ್ದ ಬಾಲ್ಯ ವಿವಾಹ ನಿಷೇಧ ಕಾಯ್ದೆ-2006ರ ಪ್ರಕಾರ ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಐಫ್.ಐ.ಆರ್ ದಾಖಲಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment