
ಚಿತ್ರದುರ್ಗ,(ಫೆ.10) : ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ 66/11 ಕೆವಿ ಜೆ.ಎನ್.ಕೋಟೆ ಮತ್ತು 66/11 ಕೆವಿ ಗರಗ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ ವಿದ್ಯುತ್ ವಿತರಣಾ ಕೇಂದ್ರಗಳಿಗೆ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ಫೆ.13ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: ಜೆ.ಎನ್.ಕೋಟೆ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರಗಳಿಂದ ಸರಬರಾಜಾಗುವ ಮಾರ್ಗಗಳಾದ ಜೆ.ಎನ್.ಕೋಟೆ, ಗೊಲ್ಲನಕಟ್ಟೆ, ಪಲ್ಲವಗೆರೆ, ಜೆ.ಸಿ.ಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಗರಗ 66/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರಗಳಿಂದ ಸರಬರಾಜಾಗುವ ಮಾರ್ಗಗಳಾದ ಸೋಮೇನಹಳ್ಳಿ, ಶ್ರೀರಾಂಪುರ, ಎಸ್.ನೇರಲಕೆರೆ, ಕಬ್ಬಳ, ಬಲ್ಲಾಳಸಮುದ್ರ, ಗರಗ, ಬೆಲಗೂರು, ಕೋಡಿಹಳ್ಳಿ, ಕಾಲ್ಕೆರೆ, ತೋಣಚೇನಹಳ್ಳಿ, ಗವಿರಂಗಾಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಗ್ರಾಹಕರು ಸಹಕರಿಸಬೇಕು ಎಂದು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
GIPHY App Key not set. Please check settings