Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಈ ಊರುಗಳಲ್ಲಿ ಮೇ 30ರಂದು ವಿದ್ಯುತ್ ವ್ಯತ್ಯಯ

---Advertisement---

ಚಿತ್ರದುರ್ಗ, ಮೇ.28: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಬೃಹತ್ ಕಾಮಗಾರಿ ಘಟಕದ ವತಿಯಿಂದ ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ ಪಂಡರಹಳ್ಳಿ ಲೈನ್‍ನ ಟ್ಯಾಪಿಂಗ್ ಪಾಯಿಂಟ್‍ನಿಂದ ಪಂಡರಹಳ್ಳಿ 66/11 ಕೆವಿ ವಿ.ವಿ ಕೇಂದ್ರದವರೆಗೆ ಡ್ರೇಕ್ ಕಂಡಕ್ಟರ್ ಬಳಸಿ ಉದ್ದೇಶಿತ 66 ಕೆವಿ ಲೈನ್ ಮತ್ತು ಕೊಯೊಟ್ ಕಂಡಕ್ಟರ್ ಬಳಸಿ ಹಾಲಿ ಇರುವ 66 ಕೆವಿ ಡಿ.ಸಿ ಲೈನ್‍ನಿಂದ ಮಲ್ಟಿ ಸಕ್ರ್ಯೂಟ್ ಟವರ್ ನಿರ್ಮಾಣ ಮಾಡಲು 66/11 ಕೆ.ವಿ ಪಂಡರಹಳ್ಳಿ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11 ಕೆ.ವಿ ಮಾರ್ಗಗಳ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ವಿ.ವಿ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಲ್ಲಾ 11 ಕೆ.ವಿ ಮಾರ್ಗಗಳಲ್ಲಿ ಇದೇ ಮೇ.30ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.  

 

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: ಅನ್ನೇಹಾಳು, ಹುಲ್ಲೂರು, ಪಂಡರಹಳ್ಳಿ, ಜಾನುಕೊಂಡ, ಸಿದ್ದಾಪುರ, ಗೋಡಬನಾಳು, ಸೊಂಡೆಕೊಳ, ಸೊಲ್ಲಾಪುರ, ಕುರುಬರಹಳ್ಳಿ, ಬೆಟ್ಟದನಾಗೇನಹಳ್ಳಿ, ಮಹದೇವನಕಟ್ಟೆ, ಸಿಂಗಾಪುರ, ಕಕ್ಕೇಹರವು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.  ಗ್ರಾಹಕರು ಸಹಕರಿಸಬೇಕು ಎಂದು ಚಿತ್ರದುರ್ಗ ಬೆಸ್ಕಾಂ ಕಾರ್ಯನಿರ್ವಾಹಕ  ಇಂಜಿನಿಯರ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...